ಸುಂಟಿಕೊಪ್ಪ ಫೆ.2 NEWS DESK : ಸಂವಿಧಾನ ಜಾಗೃತಿ ಜಾತಾ ರಥಕ್ಕೆ ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ಭವ್ಯ ಸ್ವಗತ ಕೋರಿದರು.
ಪಟ್ಟಣದಲ್ಲಿ ಸುಂಟಿಕೊಪ್ಪದ ಪ್ರಮುಖ ಬೀದಿಗಳಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ಅಧಿಕಾರಿಗಳು ಶಾಲಾ ಮಕ್ಕಳು ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ದೇಶದ ಸಂವಿಧಾನದ ಬಗ್ಗೆ ಅರಿವು ಮೂಡಿಸಿದರು.
ಪಟ್ಟಣದ ಖಾಸಗಿ ಬಸ್ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಸಿ.ಯು.ಸರಳ, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಇದು ಲಿಖಿತ ಸಂವಿಧಾನವಾಗಿದೆ. ಮೂಲತಃ 395 ವಿಧಿಗಳು 8 ಪರಿಛೇದಿಗಳು ಮತ್ತು 22 ಭಾಗಗಳಲ್ಲಿ ಸಂವಿಧಾನವನ್ನು ಬರೆಯಲಾಗಿದ್ದು, ಕಾಲಕಾಲಕ್ಕೆ ಮಾಡಿದ ತಿದ್ದುಪಡಿಗಳ ಹಿನ್ನಲೆಯಲ್ಲಿ ಸಂವಿಧಾನ ಹೆಚ್ಚು ಪರಿಷ್ಕøತವು ಸ್ಪಷ್ಟತೆಯನ್ನು ಹೊಂದಿದೆ ಎಂದು ಅವರು ಬಣ್ಣಿಸಿದರು.
ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದ್ದು, ನಾವೆಲ್ಲಾರೂ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭ ಗ್ರಾ.ಪಂ ಸದಸ್ಯರುಗಳಾದ ಶಬ್ಬೀರ್, ರಫೀಕ್ಖಾನ್ ಹಾಗೂ ಪಿ.ಎಫ್.ಸಬಾಸ್ಟೀನ್ ಭಾರತದ ಸಂವಿಧಾನ ಕುರಿತು ಮಾತನಾಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಸಂವಿಧಾನದ ಮಹತ್ವತೆಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ವಹಿಸಿದ್ದರು.
ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಹಾಗೂ ಸಾಂಕ್ಯ ಅಧಿಕಾರಿ ನಾರಾಯಣ್ ಅವರುಗಳು ನೇರಿದ್ದ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಭಾರತದ ಸಂವಿಧಾನದ ಪ್ರತಿಜ್ಞೆಯನ್ನು ಭೋದಿಸಿದರು.
ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿಂದ ಸಂವಿಧಾನ ಜಾಗೃತಿ ಜಾಥ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದ್ದರು.
ಸಭೆಯ ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ, ಐ.ಸೋಮನಾಥ, ನಾಗರತ್ನ ಸುರೇಶ್, ಲೆಕ್ಕಾಪರಿಶೋಧಕಿ ಚಂದ್ರಕಲಾ, ಸಂಧ್ಯಾ, ಶ್ರೀನಿವಾಸ್, ಡಿ.ಎಂ.ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಭಾರತ ಸಂವಿಧಾನದ ವಿಷಯದ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತ ವಿಜೇತ ಮಕ್ಕಳಿಗೆ ಪ್ರಸಂಶನ ಪತ್ರವನ್ನು ನೀಡಿದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*