ನಾಪೋಕ್ಲು ಫೆ.2 NEWS DESK : ಕೊಡಗು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಹಾಕತ್ತೂರು ಕುವೆಂಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಆರ್.ಯತೀಶ್, ಉಪಾಧ್ಯಕ್ಷ ಹೆಚ್.ಆರ್ ವಿಜಯಲಕ್ಷ್ಮಿ ಹಾಗೂ ಸರ್ವ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ ಹಾಗೂ ಸಿಬ್ಬಂದಿಗಳು, ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಭವಾನಿ, ಶಿಕ್ಷಕಿಯರಾದ ಚಂದ್ರಿಕಾ, ಜಯಶ್ರೀ ಶಾಲಾ ವಿದ್ಯಾರ್ಥಿಗಳು, ಸ್ವಸಹಾಯ ಸಂಘದ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ, ಅಧಿಕಾರಿಗಳು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಂಪಾಜೆ ಹೋಬಳಿಯ ನೋಡಲ್ ಅಧಿಕಾರಿ ಎನ್.ಪಿ.ಹೇಮ ಕುಮಾರ್ ಹಾಜರಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವರದಿ : ದುಗ್ಗಳ ಸದಾನಂದ