ಮಡಿಕೇರಿ ಫೆ.2 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮ ಅನುಷ್ಠಾನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕೆಂದು ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಬೇಕು. ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಖಜಾನೆಗೆ ಬಿಲ್ಲು ಸಲ್ಲಿಸಲು ಕೊನೆಯ ದಿನ ಹತ್ತಿರ ಬರುತ್ತಿದೆ. ಆದ್ದರಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ವಿದ್ಯುತ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ವೈದ್ಯಕೀಯ ಶಿಕ್ಷಣ, ಸಣ್ಣ ನೀರಾವರಿ, ವಸತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೈಮಗ್ಗ ಜವಳಿ, ಕಾರ್ಮಿಕ, ಲೋಕೋಪಯೋಗಿ, ಅರಣ್ಯ, ನಗರಾಭಿವೃದ್ಧಿ, ಸಾರಿಗೆ, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಆಯುಷ್, ಸಣ್ಣ ನೀರಾವರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉನ್ನತ ಶಿಕ್ಷಣ, ಕಂದಾಯ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*