ಮಡಿಕೇರಿ ಫೆ.3 NEWS DESK : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯವಾಗಿ ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ(ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ತಂದೆ/ತಾಯಿ/ ಪೋಷಕರ ಆಧಾರ್ ಪ್ರತಿ. ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿಆರ್‍ಕೆ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ ಸಂಸ್ಥೆಗಳಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ.100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗಧಿ ಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ, 14 ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾರ್ಚ್, 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ (ssp.postmatric.karnataka.gov.in).. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ಕಚೇರಿ, ದೂ.ಸಂ. 9480843156/ 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*