ಮಡಿಕೇರಿ ಫೆ.3 NEWS DESK : ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-2019 ರಂತೆ ಹಾಗೂ ಸರ್ಕಾರದ ಆದೇಶದಂತೆ ಮಡಿಕೇರಿ ನಗರಸಭೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿಬದಿ ವ್ಯಾಪಾರಿಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ನಿವೃತ್ತ ನ್ಯಾಯಾಧೀಶರಾದ ಅಧ್ಯಕ್ಷರು, ಒಬ್ಬರು ಎ ಶ್ರೇಣಿಯ ರಾಜ್ಯ ನಿವೃತ್ತ ಅಧಿಕಾರಿ ಸದಸ್ಯರು ಹಾಗೂ ಒಬ್ಬರು ಬೀದಿ ಬದಿ ವ್ಯಾಪಾರ ಕ್ಷೇತ್ರದಲ್ಲಿ ಅನುಭವವುಳ್ಳ ಸಾಮಾಜಿಕ ಕಾರ್ಯಕರ್ತರಾದ ಸದಸ್ಯರು ಕುಂದುಕೊರತೆ ನಿವಾರಣಾ ಸಮಿತಿ ರಚಿಸಬೇಕಿದೆ.
ಸಮಿತಿಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ 65 ವರ್ಷದೊಳಗಿನ ವ್ಯಕ್ತಿಗಳು ತಮ್ಮ ಆಸಕ್ತಿ ವ್ಯಕ್ತಪಡಿಸಿ ಫೆ.15 ರೊಳಗೆ ಮನವಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಗರಸಭೆಯ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.









