ಹಂಪಿ ಫೆ.3 NEWS DESK : ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ದೇಶದ ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯ. ಬಡವರು, ಅಸಹಾಯಕರ ಹಕ್ಕುಗಳ ರಕ್ಷಣೆ ಸಾಧ್ಯ. ಸಹಿಷ್ಣುತೆ, ಸಹಬಾಳುವೆ ನಮ್ಮ ಧ್ಯೇಯವಾಗಬೇಕು. ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು. ನಮ್ಮ ಧರ್ಮದ ಬಗ್ಗೆ ಅಭಿಮಾನದ ಜತೆಗೆ ಉಳಿದೆಲ್ಲ ಧರ್ಮಗಳ ಬಗ್ಗೆ ಸಹಿಷ್ಣುತೆ ಇರಬೇಕು. ಹೀಗಾದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ,’’ ಎಂದು ಪ್ರತಿಪಾದಿಸಿದರು.
‘‘ಇತಿಹಾಸ ಗೊತ್ತಿದ್ದವರು ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸದಿಂದ ಪಾಠ ಕಲಿಯಬೇಕು. ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಬಸವಾದಿ ಶರಣರ ವರ್ಗರಹಿತ, ಸಮ ಸಮಾಜ ಸೃಷ್ಟಿಸಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷ ಮಾಡುವುದು ಮನುಷ್ಯತ್ವದ ಲಕ್ಷಣವಲ್ಲ. ಮನುಷ್ಯತ್ವದ ಸಮಾಜ ನಿರ್ಮಿಸಬೇಕು. ಸಮಾನತೆಯ ಸಮಾಜ ನಿರ್ಮಿಸಬೇಕು. ಹನ್ನೆರಡನೇ ಶತಮಾನದ ಶರಣರ ತತ್ವ, ಸಿದ್ಧಾಂತಗಳನ್ನು ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಕಾಣಲು ಸಾಧ್ಯವಿದೆ’’ ಎಂದರು.
ಹಂಪಿ ಗಾಯತ್ರಿ ಪೀಠದ ದಯಾನಂದ ಪುರಿ ಸ್ವಾಮೀಜಿ ದಿವ್ಯ ಸಾನ್ನಿದ್ಯ ವಹಿಸಿ, ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವರಾದ ನಾಗೇಂದ್ರ, ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ ಗಣೇಶ್, ಲತಾ ಎಂ.ಪಿ ಪ್ರಕಾಶ್, ರಾಘವೇಂದ್ರ ಹಿಟ್ನಾಳ್ , ನಾರಾ ಭರತ್ ರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.