ನವದೆಹಲಿ ಫೆ.3 NEWS DESK : ಮಾಜಿ ಉಪ ಪ್ರಧಾನಿ ಎಲ್. ಕೆ.ಆಡ್ವಾಣಿಯವರಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಿಸಿದೆ. ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಅಡ್ವಾಣಿ ಅವರು ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ತಳಮಟ್ಟದಿಂದ ಹಿಡಿದು ಉಪಪ್ರಧಾನಿಯವರೆಗೆ ಉತ್ತಮ ಸೇವೆ ಸಲ್ಲಿರುವ ಅವರು ಗೃಹ ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.












