ಮಡಿಕೇರಿ ಫೆ.3 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆ.5 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಬೆಳಿಗ್ಗೆ 11 ಗಂಟೆಗೆ ಜಿ.ಪಂ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಾಪೂರ ತಿಳಿಸಿದ್ದಾರೆ.