ಮಡಿಕೇರಿ ಫೆ.3 NEWS DESK : ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಕುಡಿಯುವ ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು. ತಹಶೀಲ್ದಾರರು ಮತ್ತು ತಾ.ಪಂ.ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್‍ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮಾಹಿತಿ ನೀಡಿದರು. ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಇ ಸುರೇಶ್ ಕುಮಾರ್ ಅವರು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ, ಹಾಗೆಯೇ ತಾ.ಪಂಇಒಗಳಾದ ಶೇಖರ್, ಅಪ್ಪಣ್ಣ ಅವರು ಕುಡಿಯುವ ನೀರು ಪೂರೈಕೆಗೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ವಿಜಯ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಹೇಮಂತ್ ಕುಮಾರ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಕಾರ್ಮಿಕ ಅಧಿಕಾರಿ ಹರ್ಷವರ್ಧನ ಇದ್ದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*