ಮಡಿಕೇರಿ ಫೆ.3 NEWS DESK : ಕೊಡಗು ಜಿಲ್ಲೆಯ 5 ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಪ್ರಕಟಿಸಿರುವ ಹಿನ್ನೆಲೆ, ಬೆಳೆ ನಷ್ಟವಾಗಿರುವ ಕೃಷಿಕರಿಗೆ ಫ್ರೂಟ್ಸ್ ಆಪ್ ನಡಿ ನೋಂದಣಿ ಆಗಿರುವ ರೈತರಿಗೆ ಸರ್ಕಾರದ ಬೆಳೆ ನಷ್ಟ ಪರಿಹಾರವನ್ನು ನೇರವಾಗಿ ಪಾವತಿ ಮಾಡಿದ್ದು, ಈ ಸಂಬಂಧ ತೊಂದರೆ ಇದ್ದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆರಂಭಿಸಲಾಗಿರುವ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ ಕೇಂದ್ರ ಸಂಖ್ಯೆ 08272-221077, ಮಡಿಕೇರಿ ತಾಲ್ಲೂಕು ಕಚೇರಿ 08272-228396, ಕುಶಾಲನಗರ ತಾಲ್ಲೂಕು ಕಚೇರಿ 08276-200198, ಸೋಮವಾರಪೇಟೆ ತಾಲ್ಲೂಕು ಕಚೇರಿ 08276-282045, ವಿರಾಜಪೇಟೆ ತಾಲ್ಲೂಕು ಕಚೇರಿ 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು ಕಚೇರಿ 08274-249700 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.









