ಪೊನ್ನಂಪೇಟೆ ಫೆ.4 NEWS DESK : 2023-24ನೇ ಸಾಲಿನ ಮಾಯಾಮುಡಿ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಫೆ.19 ರಂದು ನಡೆಯಲಿದೆ. ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಅವರು ನೋಡಲ್ ಅಧಿಕಾರಿಯಾಗಿ ಉಪಸ್ಥಿತರಿರುವರು. ಮಾಯಮುಡಿಯ ಕಂಗಳತ್ತುನಾಡು ಮಹಿಳಾ ಸಮಾಜದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










