ಮಡಿಕೇರಿ ಫೆ.4 NEWS DESK : ನಿಷೇಧಿತ ಮಾದಕ ವಸ್ತು ಹ್ಯಾಶಿಷ್ ಆಯಿಲ್(ಗಾಂಜಾದಿAದ ತೆಗೆಯುವ ಎಣ್ಣೆ) ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಅಹಮದ್ ಕಬೀರ್(37), ಅಬ್ದುಲ್ ಖಾದರ್(37) ಹಾಗೂ ಮೊಹಮ್ಮದ್ ಮುಜಮಿಲ್(37) ಎಂಬುವವರೇ ಶಿಕ್ಷೆಗೆ ಒಳಗಾದವರು.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್ 29ರಂದು ಭಾಗಮಂಡಲ-ಮಡಿಕೇರಿ ಜಂಕ್ಷನ್‌ನಲ್ಲಿರುವ ಐ.ಬಿ ರಸ್ತೆಯಲ್ಲಿ ಕೆ.ಎಲ್.33-ಎಫ್.6825 ಮಾರುತಿ ಸೆಲೇರಿಯೋ ಕಾರಿನಲ್ಲಿ ಮೂವರು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಹಿನ್ನೆಲೆ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ, ಎಎಸ್‌ಐ ಬೆಳ್ಳಿಯಪ್ಪ ಎಂ.ಸಿ, ಮಹದೇವ ಸ್ವಾಮಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕಾರಿನಲ್ಲಿ 1 ಕೆ.ಜಿ. 160 ಗ್ರಾಂ ಹ್ಯಾಶಿಷ್ ಆಯಿಲ್ ಪತ್ತೆಯಾಗಿತ್ತು. ಬಳಿಕ ಕಾರಿನಲ್ಲಿದ್ದ ಮೂವರು ಆರೋಪಿಗಳನ್ನು ಎನ್‌ಡಿಪಿಎಸ್ ಕಾಯಿದೆಯಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ ತನಿಖಾಧಿಕಾರಿ ಪ್ರಿಯಾಂಕ 2022ರ ನವೆಂಬರ್ 21ರಂದು ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟಿಸಿದೆ. ಮಾತ್ರವಲ್ಲದೇ ಪ್ರತಿ ಆರೋಪಿಗೆ ತಲಾ 1 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ನೀಡಲು ತಪ್ಪಿದ್ದಲ್ಲಿ ಮತ್ತೆ 3 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಕೆ.ಜಿ.ಅಶ್ವಿನಿ ಅವರು ವಾದ ಮಂಡಿಸಿದರು.
ಪ್ರಕರಣದ ಆರೋಪಿಗಳ ವಿರುದ್ಧ ಸಾಕ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ತನಿಖಾಧಿಕಾರಿಗಳಾದ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ, ಎಎಸ್‌ಐ ಎಂ.ಸಿ.ಬೆಳ್ಳಿಯಪ್ಪ (ಪ್ರಸಕ್ತ ನಿವೃತ್ತ), ಸಿಬ್ಬಂದಿಗಳು ಹಾಗೂ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಂಡಿಸಿ ಕಠಿಣ ಜೈಲು ಶಿಕ್ಷೆ ವಿಧಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸಿರುವ ಸರಕಾರಿ ಅಭಿಯೋಜಕಿ ಕೆ.ಜಿ.ಅಶ್ವಿನಿ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಭಿನಂದಿಸಿದ್ದಾರೆ.
Breaking News
- *ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ : ದೈಹಿಕ ಮತ್ತು ಮಾನಸಿಕ ಕ್ಷಮತೆಗೆ ಕ್ರೀಡೆ ಪೂರಕ : ಸತೀಶ್ ರೈ ಕಟ್ಟಾವು*
- *ವೀರ ಸೇನಾನಿಗಳಿಗೆ ಅಗೌರವ : ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಆಗ್ರಹ*
- *ಬಾಳುಗೋಡುವಿನಲ್ಲಿ ಕೊಡವ ನಮ್ಮೆ ಉದ್ಘಾಟನೆ*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ಎನ್ಸಿಸಿ ಕೆಡೆಟ್ಗಳಿಂದ ಸ್ವಚ್ಛತಾ ಶ್ರಮದಾನ*
- *ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ದೇವು ಆಯ್ಕೆ*
- *ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ*
- *ವಿರಾಜಪೇಟೆ : ನೂತನ ರಸ್ತೆ ಕಾಮಗಾರಿಗೆ ಚಾಲನೆ*
- *ಅಪ್ಪಂಗಳ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆಯಲ್ಲಿ ಬೆಳೆಗಾರರಿಗೆ ಕಾಳುಮೆಣಸಿನ ತರಬೇತಿ ಕಾರ್ಯಕ್ರಮ*
- *ಮಡಿಕೇರಿ ಆಟೋ ಮಾಲೀಕ-ಚಾಲಕರ ಸಂಘದ ಕುಂದು ಕೊರತೆ ಸಭೆ*
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*