ಮಡಿಕೇರಿ ಫೆ.5 : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ 1998 ರಿಂದ 2000 ಶೈಕ್ಷಣಿಕ ವರ್ಷದಲ್ಲಿ ಕಲಾವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಾಚೆಟ್ಟಿರ ಶ್ರೀಮಾದಪ್ಪ, ಉಪಾಧ್ಯಕ್ಷರಾದ ಪುದಿಯೋಕ್ಕಡ ಸುಬ್ರಮಣಿ, ಖಜಾಂಚಿ ಬಡುವಂಡ ಶ್ರೀಸುಬ್ರಮಣಿ ಅವರು ಸೇರಿದಂತೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಪ್ರಸಕ್ತ ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷರಾಗಿರುವ ಕುಶಾಲಪ್ಪ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ಸತೀಶ್ ಮಾತನಾಡಿ ಈ ವಿದ್ಯಾಸಂಸ್ಥೆಯಲ್ಲಿ ಓದಿದ ಹೆಮ್ಮೆ ನಮಗಿದೆ. ಸ್ವಚ್ಚ ಭಾರತ ಕಲ್ಪನೆಯಡಿ ಈಶೌಚಾಲಯ ನಿರ್ಮಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಇನ್ನಷ್ಟು ಕೊಡುಗೆಗಳನ್ನು ನೀಡುವ ಶಕ್ತಿ ನಮಗೆ ಲಭ್ಯವಾಗಲಿ ಎಂದು ನುಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಮಾತನಾಡಿ ಹಳೆಯ ವಿದ್ಯಾರ್ಥಿಗಳು ಒಂದು ಸಣ್ಣ ಆರಂಭವನ್ನು ಮಾಡಿದ್ದೀರಿ. ವಿದ್ಯಾಸಂಸ್ಥೆಯ ಮೇಲಿನ ಅಭಿಮಾನ ಮೆಚ್ಚುವಂತದ್ದು. ಮುಂದೆ ಇನ್ನಷ್ಟು ಕೊಡುಗೆಗಳು ಬಂದು ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಯಲ್ಲಿ ನಿಮ್ಮ ಪಾತ್ರ ಪ್ರಮುಖವಾಗಿರಲಿ ಎಂದು ಆಶಯ ವ್ಯಕ್ತಪಡಿಸಿದರು.
ನಂತರ ಶೌಚಾಲಯವನ್ನು ಅಧಿಕೃತವಾಗಿ ವಿದ್ಯಾಸಂಸ್ಥೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
1998-2000 ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ವಿದ್ಯಾರ್ಥಿ, ಈಗ ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಹರೀಶ್ ಕಿಗ್ಗಾಲು ಸ್ವಾಗತಿಸಿ, ನಿರೂಪಿಸಿದರು.
Breaking News
- *ಕಡಂಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ*
- *ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*
- *ಶ್ವೇತ ವರ್ಣದ ಹಲ್ಲುಗಳಿಗಾಗಿ ಮನೆಮದ್ದು*
- *ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ*
- *ಕರಾಟೆ ಚಾಂಪಿಯನ್ಶಿಪ್ : ಹೆಚ್.ಎಂ.ಜಿತಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ*
- *ನ.30 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ*
- *ವೀರ ಸೇನಾನಿಗಳಿಗೆ ಅಗೌರವ : ಕಠಿಣ ಕ್ರಮಕ್ಕೆ ವಿಶ್ವಕರ್ಮ ಸಮುದಾಯ ಜಾಗೃತ ಸೇವಾ ಟ್ರಸ್ಟ್ ಒತ್ತಾಯ*
- *ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ : ದೈಹಿಕ ಮತ್ತು ಮಾನಸಿಕ ಕ್ಷಮತೆಗೆ ಕ್ರೀಡೆ ಪೂರಕ : ಸತೀಶ್ ರೈ ಕಟ್ಟಾವು*
- *ವೀರ ಸೇನಾನಿಗಳಿಗೆ ಅಗೌರವ : ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಆಗ್ರಹ*
- *ಬಾಳುಗೋಡುವಿನಲ್ಲಿ ಕೊಡವ ನಮ್ಮೆ ಉದ್ಘಾಟನೆ*