ಮಡಿಕೇರಿ ಫೆ.5 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಅಧಿಕಾರಿಗಳ ಸಭೆ ನಡೆಸಲು ಮಡಿಕೇರಿಗೆ ಭೇಟಿ ನೀಡಿದರು. ಜಿ.ಪಂ ಸಭಾಂಗಣಕ್ಕೆ ಆಗಮಿಸಿದ ಸಚಿವರನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ ಅವರು ಹೂಗುಚ್ಛ ನೀಡಿ ಬರ ಮಾಡಿಕೊಂಡರು. ಈ ಸಂದರ್ಭ ಕೊಡಗಿನ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಉಪಸ್ಥಿತರಿದ್ದರು.









