ಬೆಂಗಳೂರು ಫೆ.5 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.