ಮಡಿಕೇರಿ ಫೆ.5 NEWS DESK : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ, ರಾಜ್ಯಗಳ ಶಕ್ತಿಯನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ನೆರವು ನೀಡುವ ಅಗತ್ಯವಿದೆ ಎಂದರು.
ಕರ್ನಾಟಕ ರಾಜ್ಯ ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು.
2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ ಪಾಲಿನ ಹಣವನ್ನೂ ಹೆಚ್ಚಿಗೆ ನೀಡಬೇಕಾಗಿತ್ತು, ಆದರೆ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು, ರೈತರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಹಣ ನೀಡಿಲ್ಲ. ಮೇಕೆದಾಟು, ಮಹಾದಾಯಿ ಸೇರಿದಂತೆ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರ ಅಗತ್ಯ ಸಹಕಾರವನ್ನು ನೀಡುತ್ತಿಲ್ಲ, ನಮ್ಮ ನದಿ ನೀರನ್ನು ನಾವು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದರು.
ಕೇಂದ್ರ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ, ಅನುದಾನದ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಅಧಿವೇಶನದಲ್ಲಿ ಎಳೆ ಎಳೆಯಾಗಿ ವಿವರಿಸುತ್ತೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕದಿಂದಲೂ ಫೆ.7 ರಂದು ದೆಹಲಿ ಚಲೋ ಹೋರಾಟ ನಡೆಸಲಾಗುತ್ತಿದೆ ಎಂದರು.
Breaking News
- *ದುಬಾರೆಗೆ ವಾರ್ಷಿಕ 4ಲಕ್ಷ ಪ್ರವಾಸಿಗರ ಆಗಮನ : ಹೈಟೆಕ್ ಶೌಚಾಲಯ ಉದ್ಘಾಟನೆ*
- *ಕೂಡ್ಲೂರು ರಸ್ತೆ ಅವ್ಯವಸ್ಥೆ : ಗುಂಡಿ ಮುಚ್ಚಲು ಮುಂದಾದ ಸಹಕಾರ ಸಂಘ*
- *ಲಾರಿ, ಟ್ಯಾಕ್ಸಿ, ಸರಕು ವಾಹನದ ಮಾಲೀಕ, ಚಾಲಕರ ಸಭೆ ನಡೆಸಿದ ಕೊಡಗು ಪೊಲೀಸರು*
- *ಕೊಡಗಿನ ವಿವಿಧೆಡೆ ಮಳೆ : ಮಡಿಕೇರಿ ತಾಲ್ಲೂಕಿಗೆ 3 ಇಂಚು ಮಳೆ*
- *ಮಡಿಕೇರಿಯಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ : ವಿಶೇಷಚೇತನರು ಸಾಧನೆಯತ್ತ ಗಮನಹರಿಸಿ : ಸಿವಿಲ್ ನ್ಯಾಯಾಧೀಶೆ ಶುಭ ಸಲಹೆ*
- *ಹವಾಮಾನ ವೈಪರೀತ್ಯ : ಅಗತ್ಯ ಮುನ್ನೆಚ್ಚರ ವಹಿಸಲು ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ಸೂಚನೆ*
- *ವಿಹೆಚ್ಪಿಯಿಂದ ಸಂತರ ಪಾದಯಾತ್ರೆ ಹಾಡಿಯ ಕಡೆಗೆ : ತಿತಿಮತಿ ಹಾಡಿಗಳಿಗೆ ಶ್ರೀ ರಾಜೇಶ್ ನಾಥ್ ಯೋಗಿ ಗುರುಗಳ ಭೇಟಿ*
- *ಮಡಿಕೇರಿ ವಕೀಲರ ಸಂಘದಿಂದ ವಕೀಲರ ದಿನಾಚರಣೆ ಸಂಭ್ರಮ : ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಗೆ ಸೂಕ್ತ ಮಾಗದಶ೯ನ ನೀಡಿ : ಶಾಸಕ ಎ.ಎಸ್.ಪೊನ್ನಣ್ಣ*
- *ಕಡಂಗದಲ್ಲಿ ಡಿ.4 ರಂದು ಸಿಎನ್ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
- *ವಿರಾಜಪೇಟೆಯಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*