Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಂತರ್ ಮಂತರ್ ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ಧ್ವನಿ ಎತ್ತಲು ಬನ್ನಿ: ಸಿಎಂ ಸಿದ್ದರಾಮಯ್ಯ ಕರೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಜಂತರ್ ಮಂತರ್ ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ಧ್ವನಿ ಎತ್ತಲು ಬನ್ನಿ: ಸಿಎಂ ಸಿದ್ದರಾಮಯ್ಯ ಕರೆ

ಫೆಬ್ರವರಿ 5, 20247 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಫೆ.5 NEWS DESK : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ : ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದರು. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು.

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ: ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ , ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹ ವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7 ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ.

14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ :: ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71 ರಿಂದ ಶೇ 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ.

ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು 3000 ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ.

ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ ಎಂದರು.

ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು ಎಂದರು.

GST ನಲ್ಲಿ ರಾಜ್ಯಕ್ಕೆ ಅನ್ಯಾಯ :: GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಈಗಲೂ ನಮಗೆ , ನಮ್ಮ ರಾಜ್ಯಕ್ಕೆ GST ನಲ್ಲಿ ಅನ್ಯಾಯ ಆಗುತ್ತಲೇ ಇದೆ ಎಂದರು.

ರಾಜ್ಯದಿಂದ ನಾವು ಕೊಡುವ 100 ರೂ. ಗಳಲ್ಲಿ 12 ರೂ. ಮಾತ್ರ ನಮಗೆ ವಾಪಾಸ್ ಬರತ್ತೆ. ಉಳಿದದ್ದೆಲ್ಲಾ ಅವರೇ ಇಟ್ಕೊತಾರೆ ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ 4, 30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ 37, 252 ಕೋಟಿ ಬರುವುದು. ಕೇಂದ್ರ ಪುರಸ್ಕ್ರುತ ಯೋಜನೆಯಲ್ಲಿ 13,005 ಕೋಟಿ ಎರಡೂ ಸೇರಿ ಕೇವಲ 50,257 ಕೋಟಿ ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು.

ಒಟ್ಟು ಲೆಕ್ಕದಲ್ಲಿ ರಾಜ್ಯದಿಂದ 100 ರೂ. ಕೇಂದ್ರಕ್ಕೆ ಹೋದರೆ ಅದರಲ್ಲಿ ನಮಗೆ 12-13 ರೂ.ಗಳು ಮಾತ್ರ ವಾಪಾಸ್ ಬರುತ್ತಿದೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರವೇ ಒದಗಿಸಿದ ಅಂಕಿ ಅಂಶಗಳನ್ನು ಮುಂದಿಟ್ಟು ವಿವರಿಸಿದರು.

2017-18 ರಲ್ಲಿ ಕೇಂದ್ರದ ಬಜೆಟ್ ಗಾತ್ರ 21,46,735 ಕೋಟಿ ಇತ್ತು. ಆಗ ರಾಜ್ಯಕ್ಕೆ 31908 ಕೋಟಿ, ಗ್ರಾಂಟ್ಸ್ ಹಾಗೂ ನಗದು ಹಂಚಿಕೆ 16072 ಕೋಟಿ,,ಎರಡೂ ಸೇರಿಸಿ 47990 ಕೋಟಿ ಸಿಕ್ಕಿತ್ತು.

2018-19 ರಲ್ಲಿ ಕೇಂದ್ರ ಬಜೆಟ್ ಗಾತ್ರ 24,42,213 ಕೋಟಿಗೆ ವೃದ್ಧಿಸಿತು. ಆಗ ನಗದು ಹಂಚಿಕೆ ಸಿಕ್ಕಿದ್ದು 36215 ಕೋಟಿ. ಇಲ್ಲಿ 2000 ಕೋಟಿ ಕಡಿಮೆ ಆಯಿತು.

2023-24 ಸಾಲಿನಲ್ಲಿ 45,03,097 ಕೋಟಿ ಕೇಂದ್ರ ಬಜೆಟ್ ಆಗಿದ್ದು, ರಾಜ್ಯಕ್ಕೆ 50257 ಕೋಟಿ ಮಾತ್ರ ಸಿಗುವ ಅಂದಾಜಿದೆ. ಆevoಟuಣioಟಿ 2.2 ಯಿಂದ 2024-25 ಕ್ಕೆ 1.23 ಗೆ ಇಳಿದಿದೆ. ಇದರಿಂದಾಗಿ ರಾಜ್ಯಕ್ಕೆ ಆಗುವ ಅನ್ಯಾಯದ ಪ್ರಮಾಣ ಹೆಚ್ಚುತ್ತಲೇ ಇದೆ ಎಂದರು.

ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು :: ಬಜೆಟ್ ಗಾತ್ರ ಡಬಲ್ ಆದಾಗ, ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು. ಆದರೆ ಈಗ ಅರ್ಧಕ್ಕಿಂತ ಹೆಚ್ಚು ಕಡಿಮೆ ಆಗಿದೆ. ಸೆಸ್, ಸರ್ ಚಾರ್ಜ್ ಪ್ರತೀ ವರ್ಷ ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ. ಸರ್, ಸರ್ ಚಾರ್ಜ್ ಮೂಲಕ ಕೇಂದ್ರ ವಸೂಲಿ ಮಾಡುವ ತೆರಿಗೆಯಲ್ಲಿ ರಾಜ್ಯಗಳಿಗೆ ನಯಾ ಪೈಸೆ ವಾಪಾಸ್ ಬರಲ್ಲ. ಆದರೆ ಸೆಸ್, ಸರ್ ಚಾರ್ಜ್ ಎರಡೂ ಕೊಡೋದು ರಾಜ್ಯಗಳೇ.

ಆದ್ದರಿಂದ 16 ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ. ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲಿದ್ದೇವೆ. ಇದರ ಜತೆಗೆ ಶೇ 1 ರಷ್ಟು ರಕ್ಷಣಾ ಇಲಾಖೆಗೆ ಇಟ್ಟುಕೊಳ್ಳುತ್ತಾರೆ ಎಂದು ವಿವರಿಸಿದರು.

ಹೀಗೆ ಮೋದಿ ಅವರು ಬಂದ ನಂತರ ರಚನೆಯಾದ 15 ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ 1,87,867 ಕೋಟಿ ರೂ. ಅನ್ಯಾಯವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು. ಇಷ್ಟು ದೊಡ್ಡ ಮೊತ್ತ ನಮಗೆ ಬಾರದಿರುವುದು ರಾಜ್ಯಕ್ಕೆ ಆಗಿರುವ ಭಾರೀ ನಷ್ಟವಾಗಿದೆ.

ನೀರಾವರಿ ಯೋಜನೆಗಳಲ್ಲೂ ಭೀಕರ ಅನ್ಯಾಯ ಒತ್ತಾಯ :: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ತಿಳಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂ.ಬಂದಿಲ್ಲ . ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ ಎಂದರು.

ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ ಎಂದರು.

ಶಬರಿಯಂತೆ ಕಾದರೂ ಪ್ರಯೋಜನವಿಲ್ಲ :: ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ. ಇವರು ಸಭೆ ಕರೆದೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17901 ಕೋಟಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. ಓಆಖಈ ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ ಅಒ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಓಆಖಈ ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ ಎಂದರು.

ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು :: ಕೇಂದ್ರ ಸರ್ಕಾರ 2021 ರಲ್ಲಿ ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ. ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಮಂತ್ರಿಗಳಿಗೆ ಭೇಟಿಗೆ ಅವಕಾಶವಿಲ್ಲದಿರುವುದು, ಬರಗಾಲಕ್ಕೆ ಹಣಕಾಸು ಬಿಡುಗಡೆ ಮಾಡದಿರುವುದು, ಹಂಚಿಕೆಯಲ್ಲಿ ಅನ್ಯಾಯವಾಗಿರುವುದು ನೋಡಿದರೆ ಇದು ಒಕ್ಕೂಟ ವ್ಯವಸ್ಥೆಯ ಅಪಮಾನ ಅಲ್ಲವೇ ಎಂದು ಪ್ರಶ್ನಿಸುತ್ತಿದ್ದೇವೆ. ಉತ್ತರ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದರು.

ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ :: ಯಡಿಯೂರಪ್ಪ, ಬೊಮ್ಮಾಯಿಯವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ. ಪ್ರಹ್ಲಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. 11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದರು.

ಪ್ರತಿಭಟನೆಗೆ ಪ್ರತಿಪಕ್ಷದವರಿಗೂ ಕರೆ :: ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿ ಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ , ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದಿದ್ದರೆ ಕನ್ನಡಿಗರಿಗೆ ದ್ರೋಹ ಉಂಟಾಗಲಿದೆ ಎಂದರು.

ಆಶಾಭಾವನೆ ಇದೆ :: ಧರಣಿ ಮಾಡಿದರೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆಯೇ ಎಂಬ ಪ್ರಶ್ನೆಗೆ ನರೇಂದ್ರ ಮೋದಿಯವರು ಸೂಕ್ಷ್ಮ ಇದ್ದಾರೆ, ಪ್ರತಿಭಟನೆ ಬಳಿಕವಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ ಕರ್ನಾಟಕದ ಪಾಲಿನ ಹಣವನ್ನು ವಾಪಾಸ್ ಕೊಡಬಹುದು ಎಂಬ ಆಶಾಭಾವನೆ ಇದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಹೋಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ ಇದು ಶುದ್ದ ತಪ್ಪು ಎಂದರು.

ಬರಲಿರುವ ಅಧಿವೇಶನದಲ್ಲಿ ಶ್ವೇತ ಪತ್ರ ಹೊರಡಿಸಲು ರಾಜ್ಯ ಸರ್ಕಾರದ ಚಿಂತನೆ ಸರ್ಕಾರ ನಡೆಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.