Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ : ಸಚಿವ ಕೃಷ್ಣ ಬೈರೇಗೌಡ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ : ಸಚಿವ ಕೃಷ್ಣ ಬೈರೇಗೌಡ ಸೂಚನೆ*

ಫೆಬ್ರವರಿ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.5 NEWS DESK : ಜಿಲ್ಲೆಯಲ್ಲಿ ಹಲವು ದಶಕಗಳಿಂದ ಜಮ್ಮಾಬಾಣೆ ಭೂಮಿ ಸರ್ವೆ ಮಾಡಲು ಬಾಕಿ ಇದ್ದು, ಆ ನಿಟ್ಟಿನಲ್ಲಿ ಸಾಗುವಳಿ ಮಾಡುವವರಿಗೆ ಆರ್‍ಟಿಸಿ(ಪಹಣಿ) ಮಾಡಿಕೊಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದರು.
`ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‍ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‍ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.’
`ಕೊಡಗು ಜಿಲ್ಲೆಯಲ್ಲಿ 25 ಸಾವಿರ ಜನರು ಜಮ್ಮಬಾಣೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಪಟ್ಟೆದಾರ ಕುಟುಂಬದ ಒಬ್ಬರ ಹೆಸರಿಗೆ ಮಾತ್ರ ಭೂಮಿ ಇದ್ದು, ಆ ಕುಟುಂಬದ ಇತರರಿಗೂ ಆರ್‍ಟಿಸಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಿರ್ದೇಶನ ನೀಡಿದರು.’
ಜಮ್ಮಾಬಾಣೆ ಭೂಮಿ ಸಂಬಂಧ ತಕರಾರು ಇಲ್ಲದಿದ್ದಲ್ಲಿ ನೇರವಾಗಿ ಸರ್ವೆ ಮಾಡಬಹುದಾಗಿದೆ. ತಕರಾರು ಇದ್ದಲ್ಲಿ ಗ್ರಾಮ ಸಭೆಯಲ್ಲಿ ಇಟ್ಟು ಗ್ರಾಮಸ್ಥರ ಸಹಕಾರ ಪಡೆಯಬಹುದಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಸಲಹೆ ನೀಡಿದರು.
ಇದೊಂದು ಆಂದೋಲನ ರೂಪದಲ್ಲಿ ಕೈಗೊಳ್ಳಬೇಕಿದ್ದು, ತಹಶೀಲ್ದಾರರು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ತಂಡವು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದರು.
ಸರ್ವೇ ಮಾಡಲು ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು. ಪರವಾನಗಿ ಇರುವ ಸರ್ವೇ ಮಾಪಕರನ್ನು ಬಳಸಿಕೊಂಡು ಸರ್ವೇ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.
`ಜಮ್ಮಾ ಭೂಮಿಯನ್ನು ಸರ್ವೇ ಮಾಡಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಸಂಬಂಧ ಡ್ರಾಪ್ಟ್ ಸಿದ್ಧಪಡಿಸಿ ಕಳುಹಿಸಿಕೊಡಬೇಕು, ನಂತರ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದರು.’
ಹೆಚ್ಚಿನ ಸರ್ವೇಯರ್‍ಗಳನ್ನು ಒದಗಿಸುವುದರ ಜೊತೆಗೆ ಆಧುನಿಕ ಪರಿಕರಗಳನ್ನು ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದರು.
ಕಂದಾಯ ಇಲಾಖೆ ಬೇರೆ, ಸರ್ವೇ ಇಲಾಖೆ ಬೇರೆ ಎಂಬುದು ಮನಸ್ಸಿನಿಂದ ತೆಗೆದುಹಾಕಬೇಕು. ಇಬ್ಬರು ಸಹ ಜಂಟಿ ಅಭಿಯಾನ ಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ತಹಶೀಲ್ದಾರರು, ಉಪ ತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು, ಹೀಗೆ ಎಲ್ಲರೂ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಸಮಸ್ಯೆಯನ್ನು ಬಗೆ ಹರಿಸಬಹುದು ಎಂದರು.
ಗ್ರಾಮ ಸಭೆಯ ಸಂದರ್ಭದಲ್ಲಿ ನಡವಳಿಗೆ ಸಹಿ ಮಾಡಿಸಿಕೊಳ್ಳಬೇಕು. ಸಮಸ್ಯೆಗಳನ್ನು ಪೂರ್ಣಗೊಳಿಸಿ ಮುನ್ನಡೆಯಬೇಕು ಎಂದರು. ಸದ್ಯ ಕಾನೂನಾತ್ಮಕವಾಗಿ ಪ್ರತಿಯೊಬ್ಬರೂ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.
ಕೊಡಗು ಜಿಲ್ಲೆಯ ಕೃಷಿಕರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಪರಿಹಾರ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದರು.
ಭೂಮಿಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ. ಆ ನಿಟ್ಟಿನಲ್ಲಿ ಕಳೆದ ಆರೇಳು ತಿಂಗಳಲ್ಲಿ ಬಾಕಿ ಸಮಸ್ಯೆಗಳನ್ನು ಇತ್ಯರ್ಥ ಮಾಡದಿರುವುದಕ್ಕೆ ನೂರಾರು ನೆಪ ಹೇಳಬಹುದು. ಸಮಸ್ಯೆ ಬಗೆಹರಿಸುವುದು ಒಂದೇ ಪರಿಹಾರ. ಆ ನಿಟ್ಟಿನಲ್ಲಿ ಅಧಿಕಾರಿಗಳು ಮನಸ್ಸು ಮಾಡಬೇಕು. ಜೊತೆಗೆ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು.
ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರ ಮೊದಲ ಕಂತನ್ನು ಒದಗಿಸಲಾಗಿದ್ದು, ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ ಮಾಡುವಂತಾಗಬೇಕು ಎಂದು ಸಚಿವರು ಸಲಹೆ ನೀಡಿದರು.
ಬರ ಪರಿಹಾರದಲ್ಲಿ ಹಣ ಪೋಲು ಆಗಬಾರದು. ಪ್ರೂಟ್ಸ್ ಗುರುತಿನ ಚೀಟಿ ಇದ್ದಲ್ಲಿ ಒಳ್ಳೆಯದು ಎಂದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ವ್ಯತ್ಯಯವಾಗದಂತೆ ಗಮನಹರಿಸಬೇಕು. 24 ಗಂಟೆಯೊಳಗೆ ಕುಡಿಯುವ ನೀರು ಪೂರೈಸಬೇಕು ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮಾತನಾಡಿ ಪಟ್ಟೆದಾರರ ಹೆಸರಿಗೆ ಭೂಮಿ ಇದ್ದಲ್ಲಿ ಅವರ ಹೆಸರಿಗೆ ಸರ್ವೆ ಮಾಡಬೇಕು. ಪಟ್ಟೆದಾರ ಕುಟಂಬದವರು ಸಾಗುವಳಿ ಮಾಡುತ್ತಿದ್ದಲ್ಲಿ ಅವರ ಹೆಸರಲ್ಲಿಯೂ ಖಾತೆ ಮಾಡಿಕೊಡಬೇಕು ಎಂದರು.
ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಮಡಿಕೇರಿ ತಹಶೀಲ್ದಾರರ ನೂತನ ಕಚೇರಿ ಕಟ್ಟಡ ಇನ್ನೂ ಪೂರ್ಣಗೊಂಡಿಲ್ಲ. ಆ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾಕುಶಾಲಪ್ಪ ಮಾತನಾಡಿ, ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿರುವ ಜಮ್ಮಾ ಬಾಣೆಯನ್ನು ಸರ್ವೇ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಅವರು ಮಾತನಾಡಿ ಜಮ್ಮಾ ಬಾಣೆ ಸಂಬಂಧಿಸಿದಂತೆ ಎ.ಖರಾಬು ಜಮೀನು, ಪೈಸಾರಿ ಹಾಗೂ ಪೈಸಾರಿ ಅಲ್ಲದ ಭೂಮಿ ಮತ್ತಿತರ ಸಂಬಂಧ ಸರ್ವೇ ಮಾಡಿ ಸಾಗುವಳಿ ಕೃಷಿಕರಿಗೆ ಭೂಮಿ ಒದಗಿಸಬೇಕಿದೆ ಎಂದರು.
ಆ ನಿಟ್ಟಿನಲ್ಲಿ ಪೋಡಿ ಮುಕ್ತ ಅಭಿಯಾನ ಮಾದರಿಯಲ್ಲಿ ಜಮ್ಮಾ ಭೂಮಿಯನ್ನು ಸರ್ವೇ ಮಾಡಿ ಸಾಗುವಳಿದಾರರಿಗೆ ಆರ್‍ಟಿಸಿ ಮಾಡಿಕೊಡಬೇಕಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್‍ರಾಜಾ ಮಾತನಾಡಿ, ಜಮ್ಮಾ ಭೂಮಿ ಸಂಬಂಧಿಸಿದಂತೆ ಪಟ್ಟೆದಾರರ ಹೆಸರು ದಾಖಲೆಯಲ್ಲಿದ್ದು, ಜಮಾಬಂಧಿ ಪರಿಶೀಲನೆ ಮಾಡಬೇಕಿದೆ. ಪೋಡಿ ಮುಕ್ತ ಅಭಿಯಾನ ಮಾದರಿಯಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕಿದೆ ಎಂದರು.
ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ ಜಿಲ್ಲೆಯಲ್ಲಿ 24 ಪರವಾನಗಿ ಸರ್ವೇಯರ್‍ಗಳು ಇದ್ದು, 15 ಮಂದಿ ಸರ್ಕಾರಿ ಸರ್ವೇಯರ್‍ಗಳು ಇದ್ದಾರೆ ಎಂದರು.
ತಹಶೀಲ್ದಾರರಾದ ಪ್ರವೀಣ್ ಕುಮಾರ್ ಮಾತನಾಡಿ ಜಮ್ಮಾಭೂಮಿಗೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳಿದ್ದು, ಕೆಲವು ಕಡೆ ಪರಿಹಾರ ಆಗುತ್ತವೆ. ಇನ್ನು ಕೆಲವು ಕಡೆ ಇತ್ಯರ್ಥಕ್ಕೆ ಮುಂದೆ ಬರುವುದಿಲ್ಲ ಎಂದು ಮಾಹಿತಿ ನೀಡಿದರು.
`ಭೂಸುರಕ್ಷಾ ಅಭಿಯಾನ’ವನ್ನು ವಿರಾಜಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ 31 ತಾಲ್ಲೂಕುಗಳಲ್ಲಿ ಚಾಲನೆಗೊಳ್ಳಲಿದೆ ಎಂದರು.
ಉಪ ನೋಂದಣಾಧಿಕಾರಿ ಕಚೇರಿ ದಾಖಲೆಗಳನ್ನು ಸಹ ಡಿಜಿಟಲೀಕರಣ ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ವಿರಾಜಪೇಟೆಯಲ್ಲಿಂದು ಚಾಲನೆ ನೀಡಲಾಗುತ್ತಿದೆ. ಎರಡು ಮೂರು ತಿಂಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಚಾಲನೆಗೊಳ್ಳುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಇದೇ ಸಂದರ್ಭದಲ್ಲಿ ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರರಾದ ಕಿರಣ್ ಗೌರಯ್ಯ, ರಾಮಚಂದ್ರ, ನವೀನ್ ಇತರರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ: ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಆ.28: 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಒದಗಿಸಿರುವ ಒಂದು ಕೋಟಿ ರೂ. ಅನುದಾನದಲ್ಲಿ ದಶಮಂಟಪಗಳಿಗೆ…

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.