ಮಡಿಕೇರಿ ಫೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಜಿ.ಟಿ.ರಸ್ತೆ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ಜಿಒಎಸ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಫೆ.6 ರಂದು ಬೆಳಗ್ಗೆ 9:30 ರಿಂದ ಸಂಜೆ 5.30 ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಮೈಸೂರು ರಸ್ತೆ, ಅರಣ್ಯ ಭವನ, ಚೈನ್‍ಗೇಟ್, ಪುಟಾಣಿನಗರ, ದೇಚೂರು, ಮಂಗಳದೇವಿನಗರ ಮೂರ್ನಾಡು ರಸ್ತೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









