ಮಡಿಕೇರಿ ಫೆ.7 NEWS DESK : ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ ನಡೆಯಿತು.
ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರಕ್ತದಾನ ಜೀವನ್ಮರಣ ಹೋರಾಟದಲ್ಲಿರುವವರಿಗೆ ಬದುಕು ನೀಡುವ ಶ್ರೇಷ್ಠ ಕಾರ್ಯ ಎಂದರು.
ಶಿಬಿರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರಾಜ್, ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ, ಯೂತ್ ರೆಡ್ ಕ್ರಾಸ್ ನ ಕಾಯ೯ಕ್ರಮ ಅಧಿಕಾರಿ ಡಾ.ಎಂ.ಎಂ.ಪ್ರಕಾಶ್,ಧಾನ ಕಾಯ೯ದಶಿ೯ ಎಚ್.ಆರ್.ಮುರಳೀಧರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಶಿಬಿರದಲ್ಲಿ 53 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.