Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೇಂದ್ರ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ : ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕೇಂದ್ರ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ : ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಫೆಬ್ರವರಿ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ, ಫೆ.7 NEWS DESK : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದು ರಾಜಕೀಯ ಚಳವಳಿ ಅಲ್ಲ ::  ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ::  ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು. ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.