ಮಡಿಕೇರಿ ಫೆ.7 NEWS DESK : ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯ 35 ಸ್ವಯಂಸೇವಕ ಸದಸ್ಯರನ್ನು ಒಳಗೊಂಡ ದಾನಿಗಳ ತಂಡ ಅಮತ್ತಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಮೂವತ್ತು ಸಾವಿರ ಮೌಲ್ಯದ ಕ್ರೀಡೋಪಕರಣಗಳು, ಧ್ವನಿವರ್ಧಕ, ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು.
ಅಲ್ಲದೆ ಶಾಲೆಯ ಸುತ್ತಮುತ್ತಲಿನ ಕಾಡನ್ನು ಸ್ವಚ್ಛ ಮಾಡಿಸಿ, ಹಣ್ಣಿನ ಗಿಡಗಳನ್ನು ನೆಟ್ಟರು.
ಪ್ರತಿ ತರಗತಿಯ ವಿದ್ಯಾರ್ಥಿಗಳಿಗೆ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಈ ಸಂದರ್ಭ ಸಿಸ್ಕೋ ಸಂಸ್ಥೆಯ ಮಚ್ಚಾರಂಡ ಅಯ್ಯಪ್ಪ, ಸಂಪತ್ ಬಾನಂಡ, ಕುಟ್ಟಂದಿ ಪವನ್ ಮತ್ತು ಪ್ರಶಾಂತ್ , ಜಾಗೃತಿ ಟ್ರಸ್ಟ್ ನ ಆಡಳಿತ ಅಧಿಕಾರಿ ಆರ್.ಕಣ್ಣನ್, ಖಜಾಂಚಿ ಕೊಂಡಿಂಜಮ್ಮಂಡ ಶರಣು, ಜಾಗೃತಿ ಟ್ರಸ್ಟ್ ನ ಸಂಸ್ಥಾಪಕರು ಮತ್ತು ವ್ಯವಸ್ಥಾಪಕರಾದ ರೇಣು ಅಪ್ಪಚ್ಚು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್.ಸೋಮಕ್ಕ, ನಿವೃತ್ತ ಮುಖ್ಯ ಶಿಕ್ಷಕಿ ಮಚ್ಚಾ ರಂಡ ಗಂಗಮ್ಮ , ಶಿಕ್ಷಕ ವೃಂದ , ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಮಕ್ಕಳು ಹಾಜರಿದ್ದರು.