ಸುಂಟಿಕೊಪ್ಪ ಫೆ.7 NEWS DESK : ನಾಕೂರು-ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 24ನೇ ವಾರ್ಷಿಕೋತ್ಸವದ ಅಂಗವಾಗಿ ಫೆ.25 ರಂದು ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್‍ಮೇಳ ಕಾರ್ಯಕ್ರಮ ನಡೆಯಲಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್‍ನ ಅಧ್ಯಕ್ಷ ವಸಂತ ತಿಳಿಸಿದ್ದಾರೆ.
ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮಸ್ಥಾನ ಪಡೆದ ತಂಡಕ್ಕೆ ರೂ.20,000 ನಗದು ಹಾಗೂ ಆಕರ್ಷಕ ಟ್ರೋಪಿ, ದ್ವಿತೀಯ ಸ್ಥಾನ ರೂ 15,000 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ 10,000 ನಗದು ನೀಡಲಾಗುವುದೆಂದು ಅವರು ಹೇಳಿದರು.
ಸ್ಥಳೀಯ ಪುರುಷರಿಗೆ ಕಬ್ಬಡ್ಡಿ ಪಂದ್ಯಾವಳಿ, ಮುಕ್ತ ರಸ್ತೆ ಓಟ, ಮಹಿಳೆಯರಿಗೆ ಥ್ರೋಬಾಲ್, ಸ್ಥಳಿಯ ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ, ಹಾಗೂ 5 ವರ್ಷದೊಳಗಿನ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವವರು ಫೆ.20ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕು.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ತಂಡಗಳು ಕ್ರೀಡಾ ದಿನದಂದು ಬೆಳಿಗ್ಗೆ 10 ಗಂಟೆಯೊಳಗೆ ನೊಂದಾವಣೆ ಮಾಡಿಕೊಳ್ಳುವಂತೆ ತಿಳಿಸಿದರು.
ಫ್ರೆಂಡ್ಸ್ ಯೂತ್ ಕ್ಲಬ್ ಸದಸ್ಯರು ರಕ್ತದಾನ ಶಿಬಿರ, ಆರ್ಥಿಕವಾಗಿ ದುರ್ಬಲರಾದವರಿಗೆ ನೆರವು, ಕೊರೊನಾ ಕಾಲಘಟ್ಟದಲ್ಲಿ ಜನಸಾಮಾನ್ಯರಿಗೆ ನೆರವಿನ ಹಸ್ತಚಾಚಿರುವುದು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಜನಮಾನಸದಲ್ಲಿ ಪ್ರೀತಿ ವಿಶ್ವಾಸ ಮತ್ತು ಅಭಿಮಾನವನ್ನು ಗಳಿಸಿಕೊಂಡಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಊರಿನ ಹಬ್ಬವೆಂದೆ ಆಚರಿಸಿಕೊಂಡು ಬರಲಾಗುತ್ತಿರುವ ಕ್ರೀಡಾಕೂಟವು ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಗ್ರಾಮದ ಮೂಲಭೂತ ಸಮಸ್ಯೆಗಳನ್ನು ಪರಿಹಾರಿಸುವ ದಿಸೆಯಲ್ಲಿ ಕಳೆದ 23 ವರ್ಷಗಳಿಂದ ನೀಡಿರುವ ಕೊಡುಗೆ ಅಪಾರ ಎಂದರು.
ಗ್ರಾಮದ ಹಲವು ಕ್ರೀಡಾ ಪ್ರತಿಭೆಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನವನ್ನು ಪಡೆದುಕೊಂಡಿರುವುದು ಈ ಗ್ರಾಮದ ಹೆಗ್ಗಳಿಕೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎಂ.ಎಂ.ಶಂಕರ ನಾರಾಯಣ, ಉಪಾಧ್ಯಕ್ಷ ಟಿ.ಕೆ.ಚಂದ್ರು, ಸಹ ಕಾರ್ಯದರ್ಶಿ ಎಚ್.ಎಂ.ಹರೀಶ, ಖಜಾಂಚಿ ಕೆ.ಎಚ್.ವಿನೋದ್, ಕ್ರೀಡಾ ಕಾರ್ಯದರ್ಶಿ ಅಶೋಕ(ದೇವೆಂದ್ರ), ಕೆ.ಟಿ.ವಿಜೇಶ್, ಸಾಂಸ್ಕøತಿಕ ಕಾರ್ಯದರ್ಶಿ ಸಿ.ಬಿ.ಪ್ರವೀಣ್ ಕುಮಾರ್ ಮತ್ತಿತರರು ಇದ್ದರು.
Breaking News
- *ಕಡಂಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ*
- *ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*
- *ಶ್ವೇತ ವರ್ಣದ ಹಲ್ಲುಗಳಿಗಾಗಿ ಮನೆಮದ್ದು*
- *ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ*
- *ಕರಾಟೆ ಚಾಂಪಿಯನ್ಶಿಪ್ : ಹೆಚ್.ಎಂ.ಜಿತಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ*
- *ನ.30 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ*
- *ವೀರ ಸೇನಾನಿಗಳಿಗೆ ಅಗೌರವ : ಕಠಿಣ ಕ್ರಮಕ್ಕೆ ವಿಶ್ವಕರ್ಮ ಸಮುದಾಯ ಜಾಗೃತ ಸೇವಾ ಟ್ರಸ್ಟ್ ಒತ್ತಾಯ*
- *ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ : ದೈಹಿಕ ಮತ್ತು ಮಾನಸಿಕ ಕ್ಷಮತೆಗೆ ಕ್ರೀಡೆ ಪೂರಕ : ಸತೀಶ್ ರೈ ಕಟ್ಟಾವು*
- *ವೀರ ಸೇನಾನಿಗಳಿಗೆ ಅಗೌರವ : ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಆಗ್ರಹ*
- *ಬಾಳುಗೋಡುವಿನಲ್ಲಿ ಕೊಡವ ನಮ್ಮೆ ಉದ್ಘಾಟನೆ*