ಮಡಿಕೇರಿ ಫೆ.8 NEWS DESK : ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾಗಿ ಸುಂಟಿಕೊಪ್ಪದ ಹೆಚ್.ಯು.ರಫೀಕ್ ಖಾನ್ ಹಾಗೂ ಕೊಡಗು ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಟಿ.ಈ.ಸುರೇಶ್ ಆಯ್ಕೆಯಾಗಿದ್ದಾರೆ.
ವೇದಿಕೆಯ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಯನ್ನೊಳಗೊಂಡ ಮೈಸೂರು ವಿಭಾಗೀಯ ಕ್ಷೇತ್ರದಲ್ಲಿ ಹೆಚ್.ಯು.ರಫೀಕ್ ಖಾನ್ ಕಾರ್ಯನಿರ್ವಹಿಸಲಿದ್ದಾರೆ.









