Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡುಮಂಗಳೂರಿನಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಪೂರ್ಣಕುಂಭ ಸ್ವಾಗತ : ಸಂವಿಧಾನ ಪೀಠಿಕೆ ಕುರಿತು ಜಾಗೃತಿ*
ಇತ್ತೀಚಿನ ಸುದ್ದಿಗಳು

*ಕೂಡುಮಂಗಳೂರಿನಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಪೂರ್ಣಕುಂಭ ಸ್ವಾಗತ : ಸಂವಿಧಾನ ಪೀಠಿಕೆ ಕುರಿತು ಜಾಗೃತಿ*

February 8, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಫೆ.8 NEWS DESK :  ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ಭಾರತೀಯ ಸಂವಿಧಾನದ ಪೀಠಿಕೆ ಮತ್ತು ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಂಬಂಧ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಕೂಡುಮಂಗಳೂರು
ಗ್ರಾ.ಪಂ ವತಿಯಿಂದ ಕೂಡಿಗೆಯ ವೃತ್ತದ ಫಾರಂ ಗೇಟ್ ಪ್ರವೇಶ ದ್ವಾರದ ಬಳಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.
ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್, ರಥದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ
ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿ ಬರಮಾಡಿಕೊಂಡರು.
ಕಳಶ ಹೊತ್ತ ಆಶಾ ಕಾರ್ಯಕರ್ತೆಯರು ರಥಕ್ಕೆ ಪೂರ್ಣಕುಂಭ ಸ್ವಾಗತ ನೀಡಿದರು.
ಸಂವಿಧಾನ ಪೀಠಿಕೆಯ ಪ್ರಸ್ತಾವನೆಯನ್ನು ಓದಿ ಅದರ ಮಹತ್ವ ಕುರಿತು ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ, ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ, ದೇಶಕ್ಕೆ ಹೊಂದುವಂತೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನವನ್ನು ಅರಿತುಕೊಳ್ಳುವುದರಿಂದ ದೇಶಕ್ಕೆ ಒಳಿತಾಗುತ್ತದೆ. ಯುವ ಪೀಳಿಗೆ ಸಂವಿಧಾನದ ಬಗ್ಗೆ ಜ್ಞಾನ ಹೊಂದುವುದು ಅತೀ ಅವಶ್ಯಕ ಎಂದರು.
ಗ್ರಾ.ಪಂ.ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಮಾತನಾಡಿ, ಸಂವಿಧಾನವು ನಮ್ಮ ದೇಶದ ಸರ್ವೊಚ್ಛ ಕಾನೂನಾಗಿದ್ದು, ಇದರ ಅಡಿಯಲ್ಲಿ ಇತರೆ ಎಲ್ಲಾ ಕಾನೂನುಗಳು ಬರುತ್ತಿವೆ. ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ
ಎಂದರು.
ಈ ಜಾಗೃತಿ ಜಾಥಾದ ಯಶಸ್ವಿಗೆ ನಮ್ಮ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಹಾಜರಾಗಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಪಾಲಿಸುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸಂವಿಧಾನ ಪೀಠಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಜನ ಸಮುದಾಯಕ್ಕೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಜಾಗೃತಿ ಜಾಥಾಕ್ಕೆ ಎಲ್ಲೆಡೆ ಸಂಭ್ರಮದಿಂದ ಸ್ವಾಗತಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ನಾವೆಲ್ಲರೂ ಸಂವಿಧಾನವನ್ನು ಪಾಲಿಸುವ ಮೂಲಕ ರಾಷ್ಟ್ರದ ಸಮಗ್ರತೆ ಹಾಗೂ ಏಕತೆಯನ್ನು ಎತ್ತಿಹಿಡಿಯಬೇಕು ಎಂದರು.

ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಡಾ ಬಸಪ್ಪ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಗ್ರಾ.ಪಂ.ಸದಸ್ಯರಾದ ಜೆ.ಫಿಲೋಮಿನಾ, ಖತಿಜಾ, ಈರಯ್ಯ, ಚಂದ್ರಶೇಖರ್, ಪಿಡಿಓ ಎಂ.ಆರ್.ಸಂತೋಷ್, ಸಿಬ್ಬಂದಿ ಎಂ.ಎಲ್.ಅವಿನಾಶ್, ಉಪನ್ಯಾಸಕರು, ವಿವಿಧ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ನಾಗರಿಕರು ಇದ್ದರು.

ಸಂವಿಧಾನ ಜಾಗೃತಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳು ಭಾಷಣ, ಹಾಡು, ಲಾವಣಿ ನಡೆಸಿಕೊಟ್ಟರು.
ಸಂವಿಧಾನ ಜಾಗೃತಿಗೆ ಸಂಬಂಧಿಸಿದಂತೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಭಾರತವನ್ನು ಸದೃಢಗೊಳಿಸುವಲ್ಲಿ ಸಂವಿಧಾನ ” ಕುರಿತಂತೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಇದೇ ವೇಳೆ ಸಂವಿಧಾನದ ಮಹತ್ವ ಕುರಿತು ವಿಡಿಯೋ ಪ್ರದರ್ಶಿಸಲಾಯಿತು.
ಇದಕ್ಕೂ ಮೊದಲು ಕೂಡಿಗೆ ವೃತ್ತದಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನಕ್ಕೆ ತೆರಳಿದ ರಥದೊಂದಿಗೆ ಶಿಕ್ಷಕರು, ವಿದ್ಯಾರ್ಥಿಗಳು ಜಾಥಾ ನಡೆಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಫೆ.12 ರಂದು ಉದ್ಯೋಗ ಮೇಳ : ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶ*
Next Article *ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚನೆಗೆ ಒತ್ತಾಯ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.