ಬೆಂಗಳೂರು ಫೆ.8 NEWS DESK : ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು 2024-25ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿಗಳ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಬೌದ್ಧ ಜನಾಂಗದ ಆಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ 20 ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.