ಬೆಂಗಳೂರು ಫೆ.8 NEWS DESK : ವಿಧಾನಸೌಧದಲ್ಲಿ ನಡೆದ 2ನೇ ಹಂತದ ‘ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ.ಪರಿಹಾರ ಘೋಷಿಸಿದರು.
1. ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿದರು.
2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರು ಮಾಡಿದರು.
3. ತುಮಕೂರು ಜಿಲ್ಲೆಯ 8 ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ.ಗಳನ್ನು ಮಂಜೂರು ಮಾಡಿದರು.