ಮಡಿಕೇರಿ ಫೆ.8 NEWS DESK : ಎಲ್ಲಾ ವಿಧದಲ್ಲೂ ಆಡಳಿತ ವೈಫಲ್ಯವನ್ನು ಕಂಡಿರುವ ಮಡಿಕೇರಿ ನಗರಸಭೆ ಮಹಿಳೆಯರ ಬಗ್ಗೆ ಕನಿಷ್ಠ ಕಾಳಜಿಯನ್ನು ಕೂಡ ಹೊಂದಿಲ್ಲ ಎಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆರೋಪಿಸಿದ್ದಾರೆ.
ಮೂರ್ನಾಡು ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಅವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು ಮಹಿಳಾ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ನಗರದ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಿಂದ ಮೈಸೂರು, ಮಂಗಳೂರು, ವಿರಾಜಪೇಟೆ ಮತ್ತು ಭಾಗಮಂಡಲಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಮೈಸೂರು ರಸ್ತೆ, ಮೂರ್ನಾಡು ರಸ್ತೆ ಮತ್ತು ಮಂಗಳೂರು ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ ಗಾಗಿ ಕಾದು ನಿಂತಿರುತ್ತಾರೆ. ಆದರೆ ಈ ಪ್ರಯಾಣಿಕರಿಗಾಗಿ ನಗರಸಭೆ ಕನಿಷ್ಠ ಶೌಚಾಲಯದ ವ್ಯವಸ್ಥೆಯನ್ನು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶೌಚಾಲಯದ ಕೊರತೆಯಿಂದ ಮಹಿಳೆಯರು ಹೆಚ್ಚು ತೊಂದರೆ ಮತ್ತು ಮುಜುಗರ ಅನುಭವಿಸುತ್ತಿದ್ದಾರೆ. ತಿಮ್ಮಯ್ಯ ವೃತ್ತದ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಕದಲ್ಲೇ ಜಿಲ್ಲಾಸ್ಪತ್ರೆ ಇರುವ ಕಾರಣ ರೋಗಿಗಳ ಸಂಬಂಧಿಗಳು ಹೊರ ಊರು ಮತ್ತು ಹೊರ ಜಿಲ್ಲೆಗಳಿಂದ ಆಗಮಿಸುತ್ತಾರೆ. ಪ್ರತಿದಿನ ಈ ಭಾಗದಲ್ಲಿ 2 ಸಾವಿರಕ್ಕೂ ಅಧಿಕ ಪ್ರಯಾಣಿಕರು ಬಂದು ಹೋಗುತ್ತಾರೆ. ಮಹಿಳಾ ಪ್ರಯಾಣಿಕರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ನಗರಸಭೆ ನಿದ್ರಾವಸ್ಥೆಯಲ್ಲಿದೆ.
ನಗರದ ಪ್ರಮುಖ ಸ್ಥಳಗಳಲ್ಲಿ ಸುಸಜ್ಜಿತ ಶೌಚಾಲಯಗಳ ಕೊರತೆ ಇದೆ. ನಗರಸಭಾ ಕಚೇರಿ ಆವರಣದಲ್ಲಿರುವ ಶೌಚಾಲಯ, ಹಳೆಯ ಖಾಸಗಿ ಬಸ್ ನಿಲ್ದಾಣ ಮತ್ತು ನೂತನ ಖಾಸಗಿ ಬಸ್ ನಿಲ್ದಾಣದ ಶೌಚಾಲಯಗಳು ಗಬ್ಬೆದ್ದು ನಾರುತ್ತಿದೆ. ಸಾರ್ವಜನಿಕ ಶೌಚಾಲಯಗಳನ್ನು ಕಾಲಕ್ಕೆ ತಕ್ಕಂತೆ ಮೇಲ್ದರ್ಜೆಗೇರಿಸುವ ಪ್ರಯತ್ನವನ್ನು ನಗರಸಭೆ ಇಲ್ಲಿಯವರೆಗೆ ಮಾಡಿಲ್ಲ. ನಗರಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರಾದಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರೇ ಇದ್ದಾರೆ. ಆದರೆ ಇವರುಗಳಿಗೆ ಮಹಿಳೆಯರ ಕಷ್ಟ ಅರ್ಥವಾಗದೆ ಇರುವುದು ಮಾತ್ರ ವಿಪರ್ಯಾಸವೆಂದು ಫ್ಯಾನ್ಸಿ ಪಾರ್ವತಿ ಟೀಕಿಸಿದ್ದಾರೆ.
ಪ್ರಯಾಣಿಕರು ಮಾತ್ರವಲ್ಲದೆ ಪ್ರವಾಸಿಗರಿಗೂ ಶೌಚಾಲಯದ ಕೊರತೆಯಿಂದ ತೊಂದರೆಯಾಗಿದೆ. ಸ್ವಚ್ಛ ಭಾರತ್ ಅಭಿಯಾನದ ಪರಿಕಲ್ಪನೆ ಮಡಿಕೇರಿಯಿಂದ ದೂರವೇ ಉಳಿದಿದೆ. ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ನಗರಸಭೆಯಲ್ಲಿ ಅಗತ್ಯ ಅನುದಾನವಿದ್ದರೂ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಪ್ರಯತ್ನವನ್ನು ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಮಾಡುತ್ತಿಲ್ಲ. ಜನರಿಂದ ಚುನಾಯಿತರಾಗಿ ಬಂದವರು ನಿಷ್ಕ್ರಿಯರಾದರೆ ಅಧಿಕಾರಿಗಳಾದರೂ ಜನಪರವಾಗಿ ಕಾರ್ಯನಿರ್ವಹಿಸುವ ಕಾಳಜಿಯನ್ನು ತೋರಬೇಕಾಗುತ್ತದೆ.
ಆದರೆ ನಗರಸಭೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಇದರ ಪರಿಣಾಮ ಸಾರ್ವಜನಿಕರ ಮೇಲಾಗುತ್ತಿದೆ ಎಂದು ಆರೋಪಿಸಿರುವ ಅವರು ನಿಷ್ಕ್ರಿಯವಾಗಿರುವ ಆಡಳಿತ ಮಂಡಳಿ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಮೊದಲು ನಿಲ್ಲಿಸಲಿ ಒತ್ತಾಯಿಸಿದ್ದಾರೆ.
ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದರೂ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಕಾಳಜಿಯೇ ಇಲ್ಲದ ನಗರಸಭೆ ಜನಪರವಾಗಿರುವ ಸರ್ಕಾರದ ವಿರುದ್ಧ ಟೀಕೆ ಮಾಡುವುದು ಖಂಡನೀಯ. ಇನ್ನು ಮುಂದೆಯಾದರೂ ಮಹಿಳೆಯರಿಗೆ ಆಗುತ್ತಿರುವ ತೊಂದರೆಯನ್ನು ಪರಿಗಣಿಸಿ ತ್ವರಿತವಾಗಿ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯ ಪ್ರಯಾಣಿಕರಿಗಾಗಿ ಸುಸಜ್ಜಿತ ಶೌಚಾಲಯವನ್ನು ನಿರ್ಮಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಫ್ಯಾನ್ಸಿ ಪಾರ್ವತಿ ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*