ವಿರಾಜಪೇಟೆ ಫೆ.8 : ಸ್ಮಾರ್ಟ್ ಬ್ರೈನ್ಸ್ ಅಬಾಕಸ್ ಅಕಾಡೆಮಿ ವತಿಯಿಂದ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ 9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಮೇಲುಗೈ ಸಾಧಿಸಿದ್ದಾರೆ.
ವಿದ್ಯಾರ್ಥಿಗಳಾದ ಲಿಶ್ಮಿತಾ, ಯಶಸ್ವಿನಿ, ಮೊಹಮ್ಮದ್ ವೈಜ್, ಚಿರಂತ್, ಯದುನಂದನ್, ವಿಸ್ಮಯ್, ಚರಣ್, ಜಿತನ್, ಅಧ್ನನ್, ಎಬಿನ್, ಲಿಖಿತ, ಶ್ರೇಷ್ಠ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರ ಪಡೆದುಕೊಂಡರು.









