ವಿರಾಜಪೇಟೆ ಫೆ.8 : ವಿರಾಜಪೇಟೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ.ಗೀತಾಂಜಲಿ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಲಭಿಸಿದೆ.
ಕೆ.ಸಿ.ಗೀತಾಂಜಲಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.









