Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ ತಿಂಗಳಿನಲ್ಲಿ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ ತಿಂಗಳಿನಲ್ಲಿ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ*

ಫೆಬ್ರವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.9  NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪ್ರಥಮ ವರ್ಷದ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್-1 ಲೆದರ್ ಬಾಲ್ ಪಂದ್ಯಾವಳಿ ಮೇ ತಿಂಗಳ ಮೊದಲ ವಾರದಿಂದ ನಡೆಯಲಿದ್ದು, ಆಟಗಾರರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಸಂಚಾಲಕ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವ ಯುವಕರಿಗೆ ಸೀಮಿತವಾಗಿರುವ ಪಂದ್ಯಾವಳಿ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಆಟಗಾರರಿಗೆ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ ರೂ.1.50 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ರೂ.75 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಲೀಗ್ ಮಾದರಿಯಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ಫ್ರೆಂಚೈಸಿಗಳು ಇರಲಿದ್ದಾರೆ ಎಂದರು.
ರಿಪಬ್ಲಿಕ್ ಟಿವಿ ಕನ್ನಡ ಚಾನಲ್ ನ ಮುಖ್ಯಸ್ಥರಾಗಿರುವ ಚೇರಂಡ ಕಿಶನ್ ಮಾದಪ್ಪ, ಉತ್ತಮ ಕ್ರಿಕೆಟಿಗರಾಗಿದ್ದು, ಕಳೆದ ಹಲವು ವರ್ಷಗಳಿಂದ ಕೊಡಗಿನಲ್ಲಿ ನಡೆಯುತ್ತಿರುವ ಕ್ರೀಡಾಕೂಟಗಳಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಕೂಡ ನೀಡುತ್ತಿದ್ದಾರೆ. ಈ ಪಂದ್ಯಾವಳಿ ಅವರ ಕನಸಾಗಿದ್ದು, ಅವರ ಮಾರ್ಗದರ್ಶನ ಮತ್ತು ನಾಯಕತ್ವ ಇದೆ. ಈ ಹಿಂದೆ 10ಸ್ಪೂಟ್ರ್ಸ್ ಚಾನಲ್ ನಲ್ಲಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರಿಗಿದೆ ಎಂದು ತಿಳಿಸಿದರು.
ಹಿರಿಯರಾದ ಬಲ್ಯಾಟಂಡ ಕಾವೇರ್ ಪೂಣಚ್ಚ ಅವರ ಪ್ರೋತ್ಸಾಹ ಮತ್ತು ಪ್ರೇರಣೆಯಿಂದ ಹಾಗೂ ಜಿಲ್ಲೆಯ ಶಾಸಕದ್ವಯರ ಸಹಕಾರದಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದಾಗಿ ಹೇಳಿದರು.
ಪಂದ್ಯಾವಳಿಯ ಫ್ರೆಂಚೈಸಿಗಳಾಗಿ ಅವರೆಮಾದಂಡ ಶರಣ್ ಪೂಣಚ್ಚ, ಮಾದಂಡ ತಿಮ್ಮಯ್ಯ, ಬೊಪ್ಪಂಡ ಸೂರಾಜ್, ಮುಂಡ್ಯೋಳಂಡ ನಂದಾ ನಾಣಯ್ಯ, ಚೆಟ್ಟಿಯರಂಡ ನಿರನ್, ಕೋಟೇರ ಸುನಿಲ್, ಪಾಲಚಂಡ ಜಗನ್ ಉತ್ತಪ್ಪ, ಪರವಂಡ ಹೇಮಂತ್, ಪರವಂಡ ಮಿಥುನ್, ಬಾಚೆಟ್ಟಿರ ತೇಜಸ್ವಿ ತಿಮ್ಮಯ್ಯ, ರಾಣಿ ಬಾಬು,  ತ್ಯಾಗಿ, ಹಂಚೆಟ್ಟಿರ ಶಿಪ್ರಜ್ ಸೋಮಣ್ಣ ಸಹಕಾರ ನೀಡಿದ್ದಾರೆ ಎಂದು ಹೇಳಿದರು.
ನಿರ್ದೇಶಕ ಮಡ್ಲಂಡ ದರ್ಶನ್ ಮಾತನಾಡಿ, ಪಂದ್ಯಾವಳಿಯ ಅರ್ಜಿ ಶುಲ್ಕ ರೂ.500 ಆಗಿದ್ದು, ಬಿಡ್ಡಿಂಗ್ ಪ್ರಕ್ರಿಯೆ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ಆಟಗಾರರು ಮಾ.15 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಹರಾಜಾಗದ ಆಟಗಾರರ ನೋಂದಾವಣಿ ಶುಲ್ಕ ರೂ.500 ನ್ನು ಹಿಂತಿರುಗಿಸಲಾಗುವುದು ಎಂದು ತಿಳಿಸಿದರು.
ಆಸಕ್ತ ಆಟಗಾರರು ಮಡ್ಲಂಡ ದರ್ಶನ್ 7204702325, ಚೆರುಮಂದಂಡ ಡಾ.ಸೋಮಣ್ಣ 9980599861 ನ್ನು ಸಂಪರ್ಕಿಸಬಹುದಾಗಿದೆ. ಯೂಟ್ಯೂಬ್ ಚಾನಲ್ ನಲ್ಲಿ ಈ ಪಂದ್ಯಾವಳಿಯ ನೇರ ಪ್ರಸಾರವಿರುತ್ತದೆ ಎಂದರು.
ನಿರ್ದೇಶಕ ಕುಲ್ಲೇಟಿರ ಶಾಂತ ಕಾಳಪ್ಪ ಮಾತನಾಡಿ, ದೇಶ, ವಿದೇಶಗಳಲ್ಲಿ ನೆಲೆಸಿರುವ ಕೊಡವ ಯುವಕರು ಕೂಡ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಹ ಸಂಚಾಲಕ ಚಂಡೀರ ರಚನ್ ಚಿಣ್ಣಪ್ಪ ಮಾತನಾಡಿ, ಕೊಡವ ಯುವಕರ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯದ ಯುವಕರನ್ನು ಒಟ್ಟುಗೂಡಿಸಿ ಪಂದ್ಯಾವಳಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಚೆರುಮಂದಂಡ ಡಾ.ಸೋಮಣ್ಣ ಹಾಗೂ ಪಾಲಚಂಡ ಜಗನ್ ಉತ್ತಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ…

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.