ಮಡಿಕೇರಿ ಫೆ.9 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪ್ರವಾಸ ಆರಂಭಗೊಂಡಿತು.
ಪ್ರೌಢಶಾಲೆಗಳಲ್ಲಿ ಹಾಗೂ ಮೊರಾರ್ಜಿ ದೇಸಾಯಿ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ 8 ನೇ ತರಗತಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ) ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿನ ಹಿಂದುಳಿದ ಅಲ್ಪಸಂಖ್ಯಾತ ಹಾಗೂ ಇತರ ವರ್ಗದ (ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ) ಮಡಿಕೇರಿ ತಾಲ್ಲೂಕಿನ 100, ವಿರಾಜಪೇಟೆ ತಾಲ್ಲೂಕಿನ 140, ಸೋಮವಾರಪೇಟೆ ತಾಲ್ಲೂಕಿನ 200 ಒಟ್ಟು 480 ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ರವಾಸ ಕೈಗೊಂಡರು.
ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಬೀಳ್ಕೋಟ್ಟು ಶುಭ ಕೋರಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಶಿಕ್ಷಣಾಧಿಕಾರಿ ಎಂ.ಮಹಾದೇವ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜು, ಶಿಕ್ಷಣ ಸಂಯೋಜಕರಾದ ಹರೀಶ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಇದ್ದರು.
ಮೈಸೂರು, ಚಿತ್ರದುರ್ಗ, ಹಂಪಿ, ಬೇಲೂರು-ಹಳೇಬಿಡು, ಶ್ರವಣಬೆಳಗೋಳ ಮತ್ತಿತರ ಪ್ರವಾಸ ಕೇಂದ್ರಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ತಿಳಿಸಿದ್ದಾರೆ.
Breaking News
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ತ್ರಿವೇಣಿ ಸಂಗಮ ಮತ್ತು ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ*
- *ಸೋಮವಾರಪೇಟೆ : ಚೇಂಬರ್ ಆಫ್ ಕಾಮರ್ಸ್ನ ಸದಸ್ಯರಿಗೆ ಸನ್ಮಾನ*
- *ಕೊಡಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ*
- *ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ.ಬಿ.ಸೋಮಯ್ಯ ಆಯ್ಕೆ*
- *ಕೇಂದ್ರ ಬಜೆಟ್ : ಮುಖ್ಯಮಂತ್ರಿಗಳಿಂದ ಬೇಡಿಕೆ ಸಲ್ಲಿಕೆ*
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*