Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾಧಿಸುವ ಛಲ ಇದ್ದರೆ ಗುರಿ ಮುಟ್ಟಲು ಸಾಧ್ಯ: ಎಸ್ಪಿ ಕೆ.ರಾಮರಾಜನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸಾಧಿಸುವ ಛಲ ಇದ್ದರೆ ಗುರಿ ಮುಟ್ಟಲು ಸಾಧ್ಯ: ಎಸ್ಪಿ ಕೆ.ರಾಮರಾಜನ್

ಫೆಬ್ರವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸಿದ್ದಾಪುರ ಫೆ.9 NEWS DESK : ಸಾಧಿಸುವ ಛಲ ಇದ್ದರೆ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದ್ದು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಕೆ.ರಾಮರಾಜನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಾಡಿ ನಿವಾಸಿಗಳ ಸಂಯುಕ್ತ ಆಶ್ರಯದಲ್ಲಿ ದಿಡ್ಡಳ್ಳಿ ಸಿ ಬಿ ಹಳ್ಳಿ ಸರ್ಕಾರಿ ಗಿರಿಜನ ಆಶ್ರಮ ಶಾಲೆಯ
60ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತಮ್ಮ ಬಾಲ್ಯದ ಜೀವನವನ್ನು ನೆನಪಿಸಿಕೊಂಡು ಗ್ರಾಮೀಣ ಭಾಗದ ಶಾಲೆಯಲ್ಲಿ ಸೂಕ್ತ ಸೌಲಭ್ಯ ವ್ಯವಸ್ಥೆ ಇಲ್ಲದೆ ಶಾಲೆಯ ಬೇವಿನ ಮರದ ಕೆಳಗೆ ಪಾಠ ಕಲಿಯುತ್ತಿದ್ದೆವು. ತಂದೆ ಐದನೇ ತರಗತಿ ಓದಿದ್ದರೆ ತಾಯಿ ಶಿಕ್ಷಣದಿಂದ ದೂರ ಉಳಿದಿದ್ದರೂ ಅಂತೂ ಅವರು ನನ್ನ ಶಿಕ್ಷಣಕ್ಕೆ ಸಹಕಾರ ನೀಡುತ್ತಿದ್ದರು.ಬಡತನದಲ್ಲಿದ್ದರೂ ಶಿಕ್ಷಣದ ಮೂಲಕ ಮುಂದೆ ಬರಬೇಕೆಂದು ಆತ್ಮವಿಶ್ವಾಸ ನನ್ನಲ್ಲಿತ್ತು ಹಾಗಾಗಿ ಉನ್ನತ ಶಿಕ್ಷಣ ಪಡೆದು ಜಿಲ್ಲಾ ಎಸ್ ಪಿ ಆಗಿ ನಿಮ್ಮ ಮುಂದೆ ಇದ್ದೇನೆ.
ನಿಮ್ಮ ಮಕ್ಕಳು ಶಿಕ್ಷಣ ಮೂಲಕ ಮುಂದೆ ಬರಬೇಕಾದರೆ ಪೋಷಕರ ಸಹಕಾರ ಅತ್ಯಗತ್ಯ ಕಡ್ಡಾಯವಾಗಿ ಮಕ್ಕಳನ್ನ ಶಾಲೆಗೆ ಕಳಿಸುವುದರೊಂದಿಗೆ
ಪ್ರೀತಿ ವಾತ್ಸಲ್ಯದಿಂದ ಧೈರ್ಯ ತುಂಬಿದ್ದಲ್ಲಿ ಮಕ್ಕಳು ಉನ್ನತ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದೆ.
ಆಶ್ರಮ ಶಾಲೆಯಲ್ಲಿ ಅಚ್ಚುಕಟ್ಟಾದ ಎಲ್ಲಾ ಸೌಲಭ್ಯಗಳಿದ್ದು ಶಿಕ್ಷಕರುಗಳ ಮಾರ್ಗದರ್ಶನವನ್ನು ಮೈಗೂಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಕಿವಿ ಮಾತು ಹೇಳಿದ ಅವರು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಇದೇ ಪ್ರಥಮ ಬಾರಿಗೆ ದಿಡ್ಡಳ್ಳಿ ಗ್ರಾಮಕ್ಕೆ ಬಂದ ಎಸ್ ಪಿ ಅವರನ್ನ ಹಾಡಿ ನಿವಾಸಿಗಳು ಬ್ಯಾಂಡ್ ಸೆಟ್ ವಾದ್ಯಗಳೊಂದಿಗೆ ಅದ್ದೂರಿಯಾಗಿ ಬರಮಾಡಿಕೊಂಡು ಸ್ವಾಗತಿಸಿದರು.
ಈ ಸಂದರ್ಭ ಚೆನ್ನಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್, ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜೆ.ಕೆ ಅಪ್ಪಾಜಿ, ಲಿಂಗಮ್ಮ, ಮಾಜಿ ಸದಸ್ಯೆ ಇಂದಿರಾ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಜೆ.ಕೆ ರಾಮು, ಹಾಡಿ ಮುಖಂಡೆ ಮುತ್ತಮ್ಮ, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಸಿದ್ದಲಿಂಗ ಶೆಟ್ಟಿ, ಸಹ ಶಿಕ್ಷಕರುಗಳಾದ ವೆಂಕಟಮೂರ್ತಿ, ಪವಿತ್ರ, ಲೋಹಿತ್, ಸಿಂಧು, ಪೂರ್ಣಿಮಾ, ವಿದ್ಯಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.