ಮಡಿಕೇರಿ ಫೆ.10 NEWSDESK : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳವನ್ನು ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಉದ್ಯೋಗದಾತರು “ಯುವ ಸಮೃದ್ಧಿ ಸಮ್ಮೇಳನ”ದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಉದ್ಯೋಗಾಕಾಂಕ್ಷಿಗಳು/ ಉದ್ಯೋಗದಾತರು https://Skillconnect.kaushalkar.com/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಧಿಕಾರಿ/ ಸಿಬ್ಬಂಧಿಯವರನ್ನು ಕಚೇರಿ ವೇಳೆಯಲ್ಲಿ 08272-225851/ 9113935220/ 8147573281 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.








