ಮಡಿಕೇರಿ ಫೆ.10 NEWS DESK : ಮಡಿಕೇರಿ ನಗರಸಭೆ ಕಚೇರಿ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ‘ದಿ ಅರ್ಬನ್ ಇಂಟರ್ನಶಿಪ್ ಲರ್ನಿಂಗ್ ಪ್ರೋಗ್ರಾಮ್(ಟಿಯುಎಲ್‍ಐಪಿ) ಕಾರ್ಯಕ್ರಮದಡಿ ಮಡಿಕೇರಿ ನಗರಸಭೆ ವತಿಯಿಂದ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆಯಡಿ 8 ರಿಂದ 12 ವಾರಗಳ ಅವಧಿಯ ಇಂಟರ್ನಶಿಪ್ ತರಬೇತಿಗೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೊ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರ ಕಲಿಕ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ 2023-24 ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿದ್ದು, ಡೇ-ನಲ್ಮ್ ಅಭಿಯಾನದ ಉಪಘಟಕಗಳು ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ದಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡುವುದು ತರಬೇತಿ ಉದ್ದೇಶವಾಗಿದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಸ್ಟೈಫಂಡ್ ಪಾವತಿಸಲಾಗುವುದು.
ಆಸಕ್ತರು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ 7 ದಿನಗಳ ಒಳಗೆ ಅರ್ಜಿಯನ್ನು ನಗರಸಭೆ ಮಡಿಕೇರಿ ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ನಗರಸಭೆ ಮಡಿಕೇರಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.









