ಮಡಿಕೇರಿ ಫೆ.12 NEWS DESK : ತಪ್ಪು ಮಾಡಿದಾಗ ಪಶ್ಚಾತ್ತಾಪ ಪಟ್ಟು ಸರಿ ದಾರಿಯಲ್ಲಿ ನಡೆಯುವುದು ಸಹಜ ಅಥವಾ ಶಿಕ್ಷೆಗೆ ಗುರಿಯಾಗುವುದು ಅನಿವಾರ್ಯ. ಆದರೆ ಇಲ್ಲೊಬ್ಬ ಬಾವುಕ ಜೀವಿ ಅಪಘಾತ ಆಕಸ್ಮಿಕವಾಗಿ ನಡೆದರೂ ತಮ್ಮಿಂದಾಗಿ ಯುವಕ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ ಎಂದು ನೊಂದು ಸಾವಿಗೆ ಶರಣಾದ ಘಟನೆ ಮಡಿಕೇರಿ ತಾಲ್ಲೂಕಿನ ಹೆರವನಾಡು ಗ್ರಾಮದ ಅಪ್ಪಂಗಳದಲ್ಲಿ ನಡೆದಿದೆ.
ಮಡಿಕೇರಿ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಚೈನ್ ಗೇಟ್ ಬಳಿ ಇತ್ತೀಚೆಗೆ ಅಪಘಾತವೊಂದು ನಡೆದಿತ್ತು. ಹಾಲೇರಿಯ ಕಾಂಡನಕೊಲ್ಲಿಯ ಅಯ್ಯಕುಟ್ಟೀರ ಜಯಗಣಪತಿ ಅವರ ಪುತ್ರ, ಫೀ.ಮಾ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿ ಗಗನ್ ಸುಬ್ಬಯ್ಯ (24) ಮಡಿಕೇರಿಯಿಂದ ಮನೆಗೆ ಮರಳುತ್ತಿದ್ದರು. ಹೆರವನಾಡು ಗ್ರಾಮದ ಅಪ್ಪಂಗಳದ ಹೆಚ್.ಡಿ.ತಮ್ಮಯ್ಯ (57) ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮತ್ತೊಂದು ಒಳ ರಸ್ತೆಯಿಂದ ಚೈನ್ ಗೇಟ್ ಬಳಿಯ ಮೈಸೂರು ರಸ್ತೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭ ಧನಲ್ ಬೈಕ್ ಗೆ ತಮ್ಮಯ್ಯ ಅವರ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.
ಧನಲ್ ನೆಲಕ್ಕುರುಳುತ್ತಿದ್ದಂತೆ ಲಾರಿಯೊಂದು ಹರಿದಿದೆ, ಇದರ ಪರಿಣಾಮ ತೀವ್ರವಾಗಿ ಗಾಯಗೊಂಡ ಗಗನ್ ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡುವ ಸಂದರ್ಭ ಗಗನ್ ನ ಮೆದುಳು ನಿಷ್ಕ್ರಿಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವುದು ತಿಳಿದು ಬಂತು.
ಈ ನಡುವೆ ಅಪಘಾತದಿಂದ ಸಣ್ಣಪುಟ್ಟ ಗಾಯಗಳಾಗಿದ್ದ ತಮ್ಮಯ್ಯ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಅಲ್ಲದೆ ಗಾಯಗೊಂಡಿದ್ದ ಗಗನ್ ನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುತ್ತಲೇ ಇದ್ದರು. ನನ್ನಿಂದಾಗಿ ಯುವಕನ ಸ್ಥಿತಿ ಹೀಗಾಯಿತು ಎಂದು ನೊಂದುಕೊಳ್ಳುತ್ತಿದ್ದರು. ಶನಿವಾರ ರಾತ್ರಿ ಧನಲ್ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ತಮ್ಮಯ್ಯ ಅವರು ಮತ್ತಷ್ಟು ಬೇಸರಗೊಂಡಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಭಾನುವಾರ ನಸುಕಿನ ವೇಳೆ ಸುಮಾರು 3-4 ಗಂಟೆ ಹೊತ್ತಿನಲ್ಲಿ ಮನೆಯ ಬಳಿಯ ತೋಟದ ಮರಕ್ಕೆ ಭಾವುಕ ಜೀವಿ ತಮ್ಮಯ್ಯ ಅವರು ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ. ಕಾಕತಾಳಿಯ ಎಂಬಂತೆ ಧನಲ್ ಕೂಡ ಇದೇ ಸಮಯದ ಆಸುಪಾಸಿನಲ್ಲಿ ಇಹಲೋಕ ತ್ಯಜಿಸಿರುವುದಾಗಿ ತಿಳಿದು ಬಂದಿದೆ.
ಮೃತ ತಮ್ಮಯ್ಯ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*