ಮಡಿಕೇರಿ ಫೆ.12 NEWS DESK : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿಯ ಯಾವುದೇ ಪದವಿ ಪಡೆದು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರುವ ಹಾಗೂ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪ್ರಮುಖ ಮಾಧ್ಯಮ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಹೆಸರು ನಮೂದಿಸಿರುವ ಪತ್ರಕರ್ತರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಈ ಸಂಬಂಧ ಪ್ರಾಯೋಗಿಕವಾಗಿ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ಅರ್ಹ ಪತ್ರಕರ್ತರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಫೆಬ್ರವರಿ, 26 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂ.ಸಂ. 08272-225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*