ಮಡಿಕೇರಿ ಫೆ.12 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಭಾರತೀಯ ಸಂವಿಧಾನದ ಬಗ್ಗೆ ಸರ್ವರಲ್ಲೂ ಅರಿವು ಹಾಗೂ ಜಾಗೃತಿ ಮೂಡಿಸುವ ಸಂಬಂಧ ರಾಜ್ಯ ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮವಾದ “ಸಂವಿಧಾನ ಜಾಗೃತಿ ಜಾಥ” ಸ್ತಬ್ಧಚಿತ್ರ ಮೆರವಣಿಗೆಯೊಂದಿಗೆ ಫೆ.10 ರಿಂದ ಫೆಬ್ರವರಿ, 18 ರವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಜಾಥ ಸಾಗುವ ಮಾರ್ಗ ಹಾಗೂ ವೇಳಾಪಟ್ಟಿಯನ್ನು ಆಯಾಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ.
ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸರ್ಕಾರಿ/ ಸರ್ಕಾರೇತರ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿರಾಜಪೇಟೆ/ ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.









