ಬೆಂಗಳೂರು ಫೆ.13 NEWS DESK : ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದರು.
ಈ ಸಂದರ್ಭ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.