ಮಡಿಕೇರಿ ಫೆ.13 NEWS DESK : ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಖಾಸಗಿ ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಯಾವುದೇ ಮಠ, ಮಂದಿರಗಳನ್ನು ಸರ್ಕಾರ ವಶಪಡಿಸಿಕೊಳ್ಳಬಾರದು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ನ ರಾಜ್ಯ ಘಟಕದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ವಯಂ ನಿರ್ಣಯದ ಮೂಲಕ ದೇವಾಲಯಗಳನ್ನು ಬಿಟ್ಟುಕೊಡಬೇಕು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗುವುದಾಗಿ ತಿಳಿಸಿದರು.
ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ಇದೇ ಫೆ.16ರಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ. ವಕೀಲರು, ಮಾಜಿ ಸೈನಿಕರು, ಅಧಿಕಾರಿಗಳು, ಎಲ್ಲಾ ಸಂಘ, ಸಂಸ್ಥೆಗಳ ಪ್ರಮುಖರು, ದೇವಾಲಯದ ಅರ್ಚಕರು, ಸಿಬ್ಬಂದಿಗಳು, ಕಾರ್ಮಿಕರು, ಭಕ್ತರು ಸಭೆಗೆ ಹಾಜರಾಗಿ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದರು.
ಪ್ರಸ್ತುತ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳು ನಮ್ಮ ಪೂರ್ವಜರ ಶ್ರಮದಿಂದ ಸ್ಥಾಪಿಸಲಾಗಿದೆ. ಸರ್ಕಾರ ದೇವಾಲಯಗಳನ್ನು ನಿರ್ಮಾಣ ಮಾಡಿಲ್ಲ. ಆದಾಯ ಬರುವ ಖಾಸಗಿ ದೇವಾಲಯಗಳನ್ನು ಸರಕಾರ ವಶಪಡಿಸಿಕೊಳ್ಳುವುದಾದರೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಕಾಲೇಜುಗಳು, ಹೆಚ್ಚಾಗಿ ವರಮಾನ ಬರುವ ಮದ್ಯ ಮತ್ತು ಕಾರ್ಖಾನೆಗಳನ್ನು ಯಾಕೆ ವಶಪಡಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ದೇವಾಲಯಗಳಿಂದ ಬಂದ ಆದಾಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡವನ್ನು ನವೀಕರಣ ಮಾಡಬೇಕು, ಉತ್ತಮ ಶಿಕ್ಷಕರನ್ನು ನೇಮಕ ಮಾಡಬೇಕು ಮತ್ತು ಶಿಕ್ಷಕರಿಗೆ ಸಮರ್ಪಕವಾಗಿ ವೇತನ ಪಾವತಿಸಬೇಕು, 1ನೇ ತರಗತಿಯಿಂದ ಕನ್ನಡದ ಜೊತೆಯಲ್ಲಿ ಇಂಗ್ಲೀಷ್ ಕಲಿಕೆಯನ್ನು ಪ್ರಾರಂಭಿಸಬೇಕು, ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಬೇಕು, ರಾಜ್ಯದ ಎಲ್ಲಾ ಗೋಶಾಲೆಗಳ ಗೋವುಗಳಿಗೆ ಮೇವು ಒದಗಿಸಬೇಕು, ದೇವಾಲಯಗಳಿಗೆ ವರ್ಷಕ್ಕೊಂದು ಬಾರಿ ಸುಣ್ಣ ಬಣ್ಣ ಬಳಿಯಬೇಕು. ಅರ್ಚಕರಿಗೆ ಹಾಗೂ ಇತರ ಸಿಬ್ಬಂದಿಗಳಿಗೆ ಉತ್ತಮ ವೇತನ ನೀಡಬೇಕು ಎಂದು ಹರೀಶ್ ಜಿ.ಆಚಾರ್ಯ ಆಗ್ರಹಿಸಿದರು.
ಶುಕ್ರವಾರ ನಡೆಯುವ ಸಭೆಗೆ ಬರಲು ಸಾಧ್ಯವಾಗದವರು 9164857163, 9632611469 ಕ್ಕೆ ವಾಟ್ಸ್ ಆಪ್ ಮಾಡಿ ಅಭಿಪ್ರಾಯ ತಿಳಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ನ ಜಿಲ್ಲಾ ಉಪಾಧ್ಯಕ್ಷ ಕೆ.ರವಿ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಿ.ಆರ್.ಪ್ರದೀಪ್ ಕರ್ಕೆರಾ ಉಪಸ್ಥಿತರಿದ್ದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*