ಮಡಿಕೇರಿ ಫೆ.13 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ವಿಸ್ತರಣಾ ವಿಭಾಗದ ವತಿಯಿಂದ ನಿಟ್ಟೂರು ಗ್ರಾಮ ಪಂಚಾಯಿತಿ, ನಿಟ್ಟೂರು ಕಾರ್ಮಾಡು ಇಗ್ಗುತ್ತಪ್ಪ ಸಂಘದ ಸಹಕಾರದೊಂದಿಗೆ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕಾಫಿ ಬೆಳೆಗಾರರಿಗೆ ಮಣ್ಣು ಪರೀಕ್ಷೆ ಅಭಿಯಾನ ಮತ್ತು ಕಾಫಿ ಬೆಳೆಯ ಬಗ್ಗೆ ತಾಂತ್ರಿಕ ಮಾಹಿತಿ ನೀಡುವ ಕಾರ್ಯಾಗಾರ ನಡೆಯಿತು.
ನಿಟ್ಟೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಣ್ಣು ಪರೀಕ್ಷಾ ಅಭಿಯಾನದಲ್ಲಿ ಭಾಗವಹಿಸಿದ್ದ ನಲುವತ್ತೆರಡು ಬೆಳೆಗಾರರಿಗೆ ಸ್ಥಳದಲ್ಲೇ ಸುಣ್ಣದ ಪ್ರಮಾಣದ ಶಿಫಾರಸ್ಸಿನ ಫಲಿತಾಂಶ ನೀಡಲಾಯಿತು.
ಮಣ್ಣು ಪರೀಕ್ಷಾ ವಿಜ್ಞಾನಿ ಪ್ರಫುಲ್ಲಾ ಕುಮಾರಿ, ಮಣ್ಣು ಪರೀಕ್ಷೆಯ ಮಹತ್ವ ಹಾಗೂ ಗೊಬ್ಬರದ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಿರಿಯ ಸಂಪರ್ಕ ಅಧಿಕಾರಿ ಮುಖಾರಿಬ್ ಮಾತನಾಡಿ, ಕಾಫಿ ಬೆಳೆಗಾರರಿಗೆ ಕಾಫಿ ಕಾಪತು ಮಾಡುವ ಬಗ್ಗೆ, ಕಾಫಿ ಗಿಡಗಳಿಗೆ ಬೇಕಾದ ನೀರಿನ ಪ್ರಮಾಣದ ಬಗ್ಗೆ, ಸುಣ್ಣದ ಮತ್ತು ಗೊಬ್ಬರದ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು.
ಇಗ್ಗುತ್ತಪ್ಪ ಸಂಘದ ಅಧ್ಯಕ್ಷ ಮುಕ್ಕಾಟಿರ ಫ್ರಿನ್ಸ್ ಪೊನ್ನಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಿಟ್ಪೂರು ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಇಗ್ಗುತ್ತಪ್ಪ ಸಂಘದ ಕಾರ್ಯದರ್ಶಿ ಮುಕ್ಕಾಟಿರ ಸೋಮಯ್ಯ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪೊರಂಗಡ ಪವನ್ ಚಿಟ್ಟಿಯಪ್ಪ, ಇಗ್ಗುತ್ತಪ್ಪ ಸಂಘದ ಪ್ರಮುಖರಾದ ಕಾಟಿಮಾಡ ಶಿವಪ್ಪ, ಹೊಟ್ಟೆಂಗಡ ಅಜಿತ್, ಕಾಟಿಮಾಡ ಸುಜನ್ ಉತ್ತಪ್ಪ, ಪೊನ್ನಿಮಾಡ ನಂಜಪ್ಪ ಹಾಜರಿದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*