ಮಡಿಕೇರಿ ಫೆ.13 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯ ವಿದ್ಯುತ್ ಗ್ರಾಹಕರ, ಸಾರ್ವಜನಿಕರ ಹಿತರಕ್ಷಣಾ ದೃಷ್ಟಿಯಿಂದ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ವಿದ್ಯುತ್ ಅವಘಡಗಳು, ಅಪಘಾತಗಳನ್ನು ತಡೆಗಟ್ಟಲು ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ನಿಗಮವು ಕೈಗೊಂಡಿರುವ ಕಾರ್ಯಕ್ರಮಗಳು, ಸಾರ್ವಜನಿಕರು, ಗ್ರಾಹಕರಿಗೆ ತಿಳುವಳಿಕೆ ಮೂಡಿಸುವುದು ಹಾಗೂ ಚಾ.ವಿ.ಸ.ನಿ.ನಿ ವತಿಯಿಂದ ಕೈಗೊಂಡಿರುವ ಇತರೆ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ “ವಿದ್ಯುತ್ ಸೇವೆಗಳು ಹಾಗೂ ಸುರಕ್ಷತಾ ಅರಿವು” ಕಾರ್ಯಕ್ರಮವನ್ನು ಶಾಖಾ ಮಟ್ಟದಲ್ಲಿ ಆಯೋಜಿಸಲಾಗಿದೆ. ಆದ್ದರಿಂದ ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಹಾಜರಾಗುವಂತೆ ಕೋರಿದೆ.
ಫೆಬ್ರವರಿ, 14 ರಂದು ಮಡಿಕೇರಿ ಉಪ ವಿಭಾಗ ಕಚೇರಿ ಆವರಣ ಮತ್ತು ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣ, ಫೆಬ್ರವರಿ, 15 ರಂದು ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣ, ಫೆಬ್ರವರಿ, 16 ರಂದು ಕುಶಾಲನಗರ ಉಪ ವಿಭಾಗ ಕಚೇರಿ ಆವರಣ ಮತ್ತು ಗೋಣಿಕೊಪ್ಪಲು ಉಪ ವಿಭಾಗಕ್ಕೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಗೆ `ವಿದ್ಯುತ್ ಸೇವೆಗಳು ಹಾಗೂ ಸುರಕ್ಷತಾ ಅರಿವು’ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*