ನಾಪೋಕ್ಲು ಫೆ.13 NEWS DESK : ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆಯ ಸಹಕಾರದಿಂದ ಮೂರ್ನಾಡಿನಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಗ್ರಾ.ಪಂ ಎದುರಿನ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಸಾರ್ವಜನಿಕರಿಗೆ ಬಿಪಿ, ಶುಗರ್ ಸೇರಿದಂತೆ ವಿವಿಧ ತಪಾಸಣೆ ಮಾಡಿ ಸೂಕ್ತ ಮಾರ್ಗದರ್ಶನವನ್ನು ನೀಡಲಾಯಿತು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರಾದ ಬಿ.ಎಸ್.ರೇಖಾ, ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ, ಪಂಚಾಯತಿ ಸದಸ್ಯರು, ಸಿಬ್ಬಂದಿ, ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ




































