
ಮಡಿಕೇರಿ ಫೆ.13 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡಿರುವ ಮಹಾದ್ವಾರವನ್ನು ವಿವಿಧ ಧಾರ್ಮಿಕ ಕೈಂಕರ್ಯಗಳ ಮೂಲಕ ಲೋಕಾರ್ಪಣೆಗೊಳಿಸಲಾಯಿತು. ನಂತರ ಗಣಪತಿ ಹೋಮ, ಮಹಾಪೂಜೆ ಹಾಗೂ ಅನ್ನದಾನ ನೆರವೇರಿತು. ಸಂಜೆ ರಂಗಪೂಜೆ, ಶ್ರೀ ದೇವಿಯ ಉತ್ಸವ ಬಲಿ ಪೂಜೆ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂರ್ಪಣೆ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.





































