ಮಡಿಕೇರಿ ಫೆ.14 NEWS DESK : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಬಡ ಹಾಗೂ ಅನಾಥ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ಮೇಲ್ಪಟ್ಟ ಬಡ ಹಾಗೂ ಅನಾಥ ಹೆಣ್ಣು ಮಕ್ಕಳ ಪರವಾಗಿ ಪೋಷಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳ ಮಾಹಿತಿಗಾಗಿ 9480 2385 35, 99640 76698, 94485 0 4282 7019095426 ಸಂಪರ್ಕಿಸ ಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಫೆ.20ರ ಒಳಗೆ ಮಡಿಕೇರಿಯ ಅಲ್ ಅಮೀನ್ ಕಚೇರಿಗೆ ತಲುಪಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.