ಮಡಿಕೇರಿ ಫೆ.14 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಡಿಕೇರಿ ಮುಸ್ಲಿಂ ಜಮಾತ್ ಗಳ ಒಕ್ಕೂಟದ ವತಿಯಿಂದ ಫೆ.15 ರಂದು ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಒಕ್ಕೂಟದ ಅಧ್ಯಕ್ಷ ನಜೀರ್ ತಿಳಿಸಿದ್ದಾರೆ.
ಬೆಳಗ್ಗೆ 10.30 ಗಂಟೆಗೆ ನಡೆಯುವ ಪ್ರತಿಭಟನೆಯಲ್ಲಿ ಖ್ಯಾತ ಬರಹಗಾರರು, ಚಿಂತಕರಾದ ಶಿವಸುಂದರ್ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.









