ಮಡಿಕೇರಿ ಫೆ.14 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಮುಂತಾದ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚ ಶೇ.33 ಅಥವಾ ಗರಿಷ್ಠ ಮಿತಿ ರೂ.1 ಲಕ್ಷದ ಸಹಾಯಧನ ನೀಡಲಾಗುವುದು ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವೆಬ್‍ಸೈಟ್: https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”.
ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 08272-201449 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 29 ಕಡೆ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.









