ಮಡಿಕೇರಿ ಫೆ.15 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಯಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಫೆಬ್ರವರಿ, 28 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂರವಾಣಿ ಸಂಖ್ಯೆ 08272-220986 ಹಾಗೂ 9480032712 ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
Breaking News
- *ಹೊದ್ದೂರಿನ ಕಬಳಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*