ಮಡಿಕೇರಿ ಫೆ.15 : ಕೊಡವ ಭಾಷೆಯನ್ನು ಸಂವಿಧಾನದ 8 ನೇ ಶೆಡ್ಯೂಲ್‍ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಹೇಳಿದ್ದಾರೆ.
ಯುನೇಸ್ಕೋದ 2024 ರ ಘೋಷವಾಕ್ಯದಂತೆ ಅಂತರ ಜನಾಂಗದ ತಿಳುವಳಿಕೆಗೆ ವಿಶ್ವದಾದ್ಯಂತ ಎಲ್ಲಾ ಮಾತೃಭಾಷೆಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಚುರ ಪಡಿಸುವುದು ಈ ಬಾರಿಯ ಮಹತ್ವವಾಗಿದೆ. ಕೊಡವ ಭಾಷೆ, ಪ್ರಕೃತಿಯ ಆರಾಧಕರಾಗಿರುವ ಆದಿಮ ಸಂಜಾತ ಕೊಡವರ ಮಾತೃಭಾಷೆಯಾಗಿದ್ದು, ಜೀವನದ ಆತ್ಮವಾಗಿದೆ. ಜನ್ಮ ನೀಡಿದ ತಾಯಿ, ಮಾತೃಭಾಷೆ ಕೊಡವ, ಮಾತೃಭೂಮಿ ಕೊಡವ ಲ್ಯಾಂಡ್, ಮಾತೆ ಕಾವೇರಿ ಮತ್ತು ಪ್ರಕೃತಿ ಮಾತೆಯಿಂದ ಕೊಡವ ಜನಜೀವನವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಂವಿಧಾನದ 8 ನೇ ಶೆಡ್ಯೂಲ್‍ಗೆ ಕೊಡವ ಭಾಷೆಯನ್ನು ಸೇರಿಸಬೇಕು. ಸಂವಿಧಾನದ 347, 350, 350ಎ, 350ಬಿ ಅನುಚ್ಛೇದಗಳು ಸ್ಥಳೀಯ ಕೊಡವ ಜನಾಂಗದ ಮಾತೃಭಾಷೆಯಾದ ಕೊಡವ ಥಕ್ ನಂತಹ ಸೂಕ್ಷ್ಮ ಭಾಷೆಯ ಪ್ರಚಾರ, ರಕ್ಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಅನ್ವಯವಾಗುವಂತೆ ಮಾಡಬೇಕು. ಕೊಂಕಣಿ ಭಾಷೆಗೆ ಸಮಾನವಾಗಿ ಕೊಡವ ಥಕ್ ಅನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮತ್ತು ಕೊಡಗಿನ ಆಡಳಿತ ಭಾಷೆಯನ್ನಾಗಿ ಮಾಡಬೇಕು. 1 ನೇ ತರಗತಿಯಿಂದ ಪದವಿ ಹಂತದವರೆಗೆ ಪಠ್ಯಕ್ರಮದಲ್ಲಿ ಕೊಡವ ಭಾಷೆಯನ್ನು ಕಡ್ಡಾಯಗೊಳಿಸಬೇಕು. ರಾಜ್‍ಗಿರ್‍ನಲ್ಲಿರುವ ಪ್ರಾಚೀನ ನಳಂದಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ, ಟೋಕಿಯೊದ ಯುಎನ್ ವಿಶ್ವವಿದ್ಯಾಲಯ, ಅಮರಕಂಟಕ್‍ನಲ್ಲಿರುವ ಇಂದಿರಾಗಾಂಧಿ ಬುಡಕಟ್ಟು ವಿಶ್ವವಿದ್ಯಾಲಯ, ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾಲಯ ಮತ್ತು ತಿರುವನಂತಪುರಂನಲ್ಲಿರುವ ದ್ರಾವಿಡಿಯನ್ ಲ್ಯಾಂಗುಗೇ ಸಂಶೋಧನಾ ಸಂಸ್ಥೆಯಲ್ಲಿ ಕೊಡವ ಭಾಷಾ ಬೆಂಚ್ ಅನ್ನು ಸ್ಥಾಪಿಸಬೇಕು. ಮಡಿಕೇರಿಯಲ್ಲಿ ವಿಶ್ವ ಕೊಡವಾಲಜಿ ಅಧ್ಯಯನ ಕೇಂದ್ರ ಸ್ಥಾಪಿಸಬೇಕು. ಕೊಡವ ಭಾಷೆಯನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಒಂದನ್ನಾಗಿ ಮಾಡಬೇಕು. ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಬುಡಕಟ್ಟು ಜನಾಂಗದ ಗನ್ ಸಂಸ್ಕಾರವನ್ನು ಸಿಖ್ಖರ ಕಿರ್ಪಾನ್‍ಗೆ ಸಮಾನವಾಗಿ ನಮ್ಮ ಸಂವಿಧಾನದ 25 ಮತ್ತು 26 ರಡಿಯಲ್ಲಿ ರಕ್ಷಿಸಬೇಕು. ಕೊಡವ ಭಾಷೆ ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ ಜನಾಂಗಕ್ಕೆ ಎಸ್‍ಟಿ ಟ್ಯಾಗ್‍ನೊಂದಿಗೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು ಎಂದು ಧರಣಿ ಸಂದರ್ಭ ಒತ್ತಾಯಿಸುವುದಾಗಿ ನಾಚಪ್ಪ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*