ಮಡಿಕೇರಿ ಫೆ.15 NEWS DESK : ಇತ್ತೀಚೆಗೆ ಬೆಂಗಳೂರಿನ ಭಾರತಯೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಸಾಯಿ ಹಾಕಿ ಪಂದ್ಯಾವಳಿ-2024 ರಲ್ಲಿ ಮಡಿಕೇರಿ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದ 19 ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿದ್ದಾರೆ.
ಈ ವಿದ್ಯಾರ್ಥಿನಿಯರಿಗೆ ಅಭಿನಂದಿಸುವ ಕಾರ್ಯಕ್ರಮವು ಫೆ.19 ರಂದು ಸಂಜೆ 4.30 ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ ಎಂದು ಸಾಯಿ ಮೇಲ್ವಿಚಾರಕಿ ಮಿನಿ ಉಣ್ಣಿರಾಜ್ ತಿಳಿಸಿದ್ದಾರೆ.









